ಡೈಲಿ ವಾರ್ತೆ:29 ಮಾರ್ಚ್ 2023

BIG BREAKING: ಮೇ 10ರಂದು ಕರ್ನಾಟಕ ವಿಧಾನ ಸಭೆಗೆ ಮತದಾನ- ಮೇ 13 ಫಲಿತಾಂಶ

ನವದೆಹಲಿ: ಕರ್ನಾಟಕ ರಾಜ್ಯ ವಿಧಾನ ಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 10ರಂದು ಮತದಾನ ನಡೆಯಲಿದೆ. ಮೇ 13 ಫಲಿತಾಂಶ ಹೊರಬೀಳಲಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಚುನಾವಣೆ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ರಾಜ್ಯ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ.