



ಡೈಲಿ ವಾರ್ತೆ:30 ಮಾರ್ಚ್ 2023


ಕಡಬ:ನಾಪತ್ತೆಯಾಗಿದ್ದ 10ನೇ ತರಗತಿಯ ಬಾಲಕನ ಮೃತದೇಹ ನದಿಯಲ್ಲಿ ಪತ್ತೆ!
ಕಡಬ: ಎಸ್ಸೆಸೆಲ್ಸಿ ಪರೀಕ್ಷೆಯ ಮುನ್ನಾ ದಿನವೇ ಹತ್ತನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬದಲ್ಲಿ ನಡೆದಿದೆ.
ಟ್ಯೂಷನ್’ಗೆಂದು ತೆರಳಿ ನಾಪತ್ತೆಯಾಗಿದ್ದ ಹತ್ತನೇ ತರಗತಿ ಅದ್ವೈತ್ ಎಂಬಾತನ ಬಾಲಕನ ಮೃತದೇಹವು ಕುಮಾರಧಾರಾ ನದಿಯ ನಾಕೂರು ಗಯ ಎಂಬಲ್ಲಿ ಗುರುವಾರ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಬುಧವಾರ ಅದ್ವೈತ್ ಟ್ಯೂಷನ್ ಗೆಂದು ತೆರಳಿ ಆ ಬಳಿಕ ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದ. ಮನೆಯವರು ಹಾಗೂ ಸ್ಥಳೀಯರು ಹುಡುಕಾಡಿದಾಗ ಬಾಲಕನ ಬ್ಯಾಗ್ ಹಾಗೂ ಐಡಿ ಕಾರ್ಡ್ ಕುಮಾರಧಾರ ನದಿಯ ನಾಕೂರು ಗಯ ಎಂಬಲ್ಲಿ ಕಂಡುಬಂದಿದ್ದು, ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಡಿದಾಗ ಮೃತದೇಹವು ಪತ್ತೆಯಾಗಿದೆ.