ಡೈಲಿ ವಾರ್ತೆ:30 ಮಾರ್ಚ್ 2023
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಮನೆಯಲ್ಲೇ ಚೆಕ್ ವಿತರಿಸುತ್ತಿದ್ದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲು
ಮೂಡಿಗೆರೆ: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಈ ಹಿನ್ನೆಲೆ ಬುಧವಾರ (ಮಾರ್ಚ್ 29)ರಿಂದಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಆದರೂ ಕೂಡ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ತಮ್ಮ ಮನೆಯಲ್ಲೇ ಚೆಕ್ ವಿತರಣೆ ಮಾಡುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಘನೆ ಮಾಡಿದ್ದು, ಅವರ ವಿರುದ್ಧ ದೂರು ದಾಖಲಿಸಲಾಗಿದೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘಿನೆ ಹಿನ್ನೆಲೆ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಎಂ.ಪಿ.ಕುಮಾರಸ್ವಾಮಿ ವಿರುದ್ಧ ತಾಲೂಕು ಚುನಾವಣಾ ಅಧಿಕಾರಿ ಪಿ.ರಾಜೇಶ್ ದೂರು ದಾಖಲಿಸಿದ್ದಾರೆ. ಇಂದು ತಮ್ಮ ನಿವಾಸದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ ಎಂ.ಪಿ.ಕುಮಾರಸ್ವಾಮಿಯವರು ಜನರಿಗೆ ಚೆಕ್ ವಿತರಣೆ ಮಾಡಿದ್ದಾರೆ. ಆಗ ದಿಢೀರ್ ಭೇಟಿ ಕೊಟ್ಟ ಚುನಾವಣಾ ಅಧಿಕಾರಿಗಳು ಕಾರ್ಯಕ್ರಮವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಮೂಡಿಗೆರೆ ಪೊಲೀಸರು ನೀತಿ ಸಂಹಿತೆ ಉಲ್ಲಂಘನೆಯಡಿ ಶಾಸಕರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.