ಡೈಲಿ ವಾರ್ತೆ:31 ಮಾರ್ಚ್ 2023
ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪತಿ; ಮಕ್ಕಳು ಅನಾಥ
ಮಂಡ್ಯ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೆ.ಶೆಟ್ಟಿಹಳ್ಳಿಯ ಪುರುಷೋತ್ತಮ (45) ಹಾಗೂ ವಿದ್ಯಾ(32) ಮೃತಪಟ್ಟವರು.
ಕೌಟುಂಬಿಕ ಕಲಹದಿಂದ ಬೇಸತ್ತು ಪುರುಷೋತ್ತಮ ಹಾಗೂ ವಿದ್ಯಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ .
ಪತಿ ಕೆಲಸಕ್ಕೆ ತೆರಳಿದಾಗ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆ, ವಿಷಯ ತಿಳಿದು ಮನೆಗೆ ಬಂದ ಪತಿ ಮನೆ ಪಕ್ಕದ ಜಮೀನಿಗೆ ತೆರಳಿ ನೇಣಿಗೆ ಕೊರಳೊಡ್ಡಿದ್ದಾರೆ. ಮೃತ ಪುರುಷೋತ್ತಮ್ ಮೈಸೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು.
ಮೃತ ದಂಪತಿಗೆ 7 ಹಾಗೂ 5 ವರ್ಷದ ಇಬ್ಬರು ಮಕ್ಕಳಿದ್ದಾರೆ.
ತಂದೆ-ತಾಯಿ ಕಳೆದುಕೊಂಡು ಮಕ್ಕಳು ಅನಾಥರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನ ನಡೆಸಿದ್ದಾರೆ. ಮೃತ ದೇಹಗಳನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.