ಡೈಲಿ ವಾರ್ತೆ:01 ಏಪ್ರಿಲ್ 2023

ಮಾಡಾಳ್ ವಿರೂಪಾಕ್ಷಪ್ಪಗೆ ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು : ಬಿಜೆಪಿ ಶಾಸಕ ‘ಮಾಡಾಳ್ ವಿರೂಪಾಕ್ಷಪ್ಪ’ ಗೆ ಏ.11 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.

ಮಾಡಾಳ್ ವಿರೂಪಾಕ್ಷಪ್ಪ’ ಲೋಕಾಯುಕ್ತ ಕಸ್ಟಡಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆ ಇಂದು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.
ವಿಚಾರಣೆ ನಡೆಸಿದ ಕೋರ್ಟ್ ಬಿಜೆಪಿ ಶಾಸಕ ‘ಮಾಡಾಳ್ ವಿರೂಪಾಕ್ಷಪ್ಪ’ ಗೆ ಏ.11 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.
ಇತ್ತೀಚೆಗೆ ಲೋಕಾಯುಕ್ತ ಪೊಲೀಸರಿಂದ ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಂತ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನಿರಾಕರಿಸಿದ ಬಳಿಕ, ಲೋಕಾಯುಕ್ತ ಪೊಲೀಸರಿಂದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲಾಗಿತ್ತು. ನಂತರ ಅವರನ್ನು ಐದು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿತ್ತು, ಬಿಜೆಪಿ ಶಾಸಕ ‘ಮಾಡಾಳ್ ವಿರೂಪಾಕ್ಷಪ್ಪ’ ಲೋಕಾಯುಕ್ತ ಕಸ್ಟಡಿ ಇಂದಿಗೆ ಅಂತ್ಯಗೊಂಡಿದ್ದು, ಇಂದು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.

ಮಾಡಾಳ್ ಪ್ರಕರಣ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಪ್ರಕರಣ ಸಂಬಂಧ ನ್ಯಾಯಮೂರ್ತಿ ಬಿ.ಜಯಂತ್ ಕುಮಾರ್ ವಿಚಾರಣೆ ನಡೆಸಿದ್ದರು. ನ್ಯಾಯಪೀಠದ ಮುಂದೆ ಲೋಕಾಯುಕ್ತ ಪೊಲೀಸರ ಪರ ವಕೀಲರು ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೋರಿದರು. ಆದ್ರೇ ಶಾಸಕರ ಪರ ವಕೀಲರು ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದರು. ಇದರ ನಡುವೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಏಪ್ರಿಲ್ 1 ರವರೆಗೆ ಐದು ದಿನ ಲೋಕಾಯುಕ್ತ ಪೊಲೀಸರಿಗೆ ಕಸ್ಟಡಿಗೆ ನೀಡಿ ಆದೇಶ ಹೊರಡಿಸಲಾಗಿತ್ತು. ಇದೀಗ ಏಪ್ರಿಲ್ 11 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.