ಡೈಲಿ ವಾರ್ತೆ:02 ಏಪ್ರಿಲ್ 2023

ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಭಾರೀ ಸಂಖ್ಯೆಯ ಪೊಲೀಸರಿಂದ ತಪಾಸಣೆ!

ಮಂಗಳೂರು: ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ರವಿವಾರ ಭಾರೀ ಸಂಖ್ಯೆಯ ಪೊಲೀಸರು ದಿಢೀರ್ ತಪಾಸಣೆ ನಡೆಸಲಾಗಿದೆ.
ದಿಢೀರ್ ಆಗಿ ಸುಮಾರು 250 ಮಂದಿ ಪೊಲೀಸರು ಏಕಕಾಲಕ್ಕೆ ಆಗಮಿಸಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ವಿಶೇಷ ತಪಾಸಣೆ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಆಯುಕ್ತ ಕುಲದೀಪ್ ಕುಮಾರ್ ಜೈನ್ ನೇತೃತ್ವದಲ್ಲಿ, ಡಿಸಿಪಿ ಅಂಶುಕುಮಾರ್ ಸಹಿತ ಹಿರಿಯ ಅಧಿಕಾರಿಗಳು ತಪಾಸಣೆ ಮಾಡಿಸುತ್ತಿದ್ದಾರೆ.