ಡೈಲಿ ವಾರ್ತೆ:04 ಏಪ್ರಿಲ್ 2023

✒️ ಓಂಕಾರ ಎಸ್. ವಿ. ತಾಳಗುಪ್ಪ

ಕಾರವಾರ:ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್ – ಪ್ರಯಾಣಿಕರಿಗೆ ಗಾಯ

ಕಾರವಾರ:ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಒಂದರ ಸ್ಟೇರಿಂಗ್ ತುಂಡಾಗಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕೆಲವು ಪ್ರಯಾಣಿಗರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ 16ನೇ ಮೈಲಿಕಲ್ ಬಳಿ ಮಂಗಳವಾರ ವರದಿಯಾಗಿದೆ.

ಹಳಿಯಾಳದಿಂದ ಸಾಗರಕ್ಕೆ ಹೋಗುತ್ತಿದ್ದ ಬಸ್ ನಲ್ಲಿ 45ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಘಟನೆಯಿಂದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದ ಎಲ್ಲಾ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ.
ಈ ಸಂಬಂಧ ಸಿದ್ದಾಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.