



ಡೈಲಿ ವಾರ್ತೆ:05 ಏಪ್ರಿಲ್ 2023




ಉಜಿರೆ:ಬಸ್ಸಿನಲ್ಲಿ ಪರಿಚಯಸ್ಥ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ತಂಡದಿಂದ ಯುವಕನಿಗೆ ಹಲ್ಲೆ
ಬೆಳ್ತಂಗಡಿ:ಬಸ್ಸಿನಲ್ಲಿ ಪರಿಚಯಸ್ಥ ಸಹಪ್ರಯಾಣಿಕ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಬಸ್ ತಡೆದು ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಉಜಿರೆಯಲ್ಲಿ ನಡೆದಿದೆ.
ಕಕ್ಕಿಂಜೆ ನಿವಾಸಿ ಶಾಹಿಲ್ (22) ಹಲ್ಲೆಗೆ ಒಳಗಾದ ಯುವಕ.
ಸಾಹಿಲ್ ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ನಿನ್ನೆ ಮಂಗಳೂರಿನಿಂದ ಬಸ್ಸಿನಲ್ಲಿ ಬರುತ್ತಿದ್ದ ವೇಳೆ ತನ್ನ ಪರಿಚಯದ ಯುವತಿಯೊಂದಿಗೆ ಮಾತನಾಡುತ್ತಾ ಪ್ರಯಾಣಿಸುತ್ತಿದ್ದ ಎನ್ನಲಾಗಿದೆ. ಯುವತಿ ಬೆಳ್ತಂಗಡಿಯಲ್ಲಿ ಇಳಿದಿದ್ದು, ಬಸ್ಸಿನಲ್ಲಿ ಇವರನ್ನು ಗಮನಿಸಿ ಯಾರೋ ಯುವಕರಿಗೆ ಮಾಹಿತಿ ನೀಡಿದ್ದು, ಈತನನ್ನು ಉಜಿರೆಯಲ್ಲಿ ಕಾದು ನಿಂತಿದ್ದ ಯುವಕರ ತಂಡ ಬಸ್ಸಿನಿಂದ ಹೊರಗೆಳೆದು ಹಲ್ಲೆ ಮಾಡಿದ್ದಾರೆ. ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಯುವಕ ಆಸ್ಪತ್ರೆಗೆ ದಾಖಲಾಗಿದ್ದು ಪೊಲೀಸರು ಯುವಕನಿಂದ ಮಾಹಿತಿ ಕಲೆ ಹಾಕಿದ್ದಾರೆ.
ಚುನಾವಣೆ ಸಮೀಪಿಸುತ್ತಿದ್ದಂತೆ ಮಾತನಾಡಿದ ಕಾರಣಕ್ಕೆ ಯುವಕನ ಮೇಲೆ ಹಲ್ಲೆ ಮಾಡಿರುವುದಕ್ಕೆ ಇದೀಗ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ದುಷ್ಕರ್ಮಿಗಳ ವಿರುದ್ಧ ಕ್ರಮವನ್ನು ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.

