ಡೈಲಿ ವಾರ್ತೆ:07 ಏಪ್ರಿಲ್ 2023

ಉಪ್ಪಿನಂಗಡಿ: ಗೆಳತಿಯರಿಬ್ಬರು ಒಂದೇ ದಿನ ಹೊಟ್ಟೆ ನೋವಿನಿಂದ ಮೃತ್ಯು:ಆತ್ಮಹತ್ಯೆ ಶಂಕೆ!?

ನೆಲ್ಯಾಡಿ:ಹೊಟ್ಟೆನೋವಿನಿಂದ ಬಳಲಿ ಆಸ್ಪತ್ರೆಗೆ ದಾಖಲಾದ ನೆರೆಕರೆಯ ಮನೆಯ ಇಬ್ಬರು ಯುವತಿಯರು ಮೃತಪಟ್ಟಿದ್ದು, ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.

ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ (22) ಮತ್ತು ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯ (21) ಸುರತ್ಕಲ್ ಆಸ್ಪತ್ರೆಯಲ್ಲಿ ಮಧ್ಯಾಹ್ನ ಮೃತಪಟ್ಟರೆನ್ನಲಾಗಿದೆ.

ರಕ್ಷಿತಾ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಲಾವಣ್ಯ (21) ಸುರತ್ಕಲ್ ಆಸ್ಪತ್ರೆಯಲ್ಲಿ ಮಧ್ಯಾಹ್ನ ಮೃತಪಟ್ಟರೆನ್ನಲಾಗಿದೆ.

ಇವರಿಬ್ಬರು ಸೇವಾ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದರು. ಎ.4ರಂದು ಸಂಜೆ ರಕ್ಷಿತಾ ಮತ್ತು ಲಾವಣ್ಯ ತಮ್ಮ ಮನೆಯಲ್ಲಿ ಹೊಟ್ಟೆ ನೋವಿನಿಂದ ನರಳಾಡಿದ್ದರು. ಇವರಿಬ್ಬರನ್ನು ನೆಲ್ಯಾಡಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.
ರಕ್ಷಿತಾ ಅವರನ್ನು ಅವರ ಮನೆಯವರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಲಾವಣ್ಯರನ್ನು ಅವರ ಮನೆಯವರು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದು ವೈದ್ಯರ ಸಲಹೆಯಂತೆ ಸುರತ್ಕಲ್ ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ರಕ್ಷಿತಾ ಮತ್ತು ಲಾವಣ್ಯ ಸಾವನ್ನಪ್ಪಿದ್ದಾರೆ.ಈ ಬಗ್ಗೆ ವೈದ್ಯಕೀಯ ವರದಿ ಬಂದ ನಂತರವಷ್ಟೇ ಕಾರಣ ತಿಳಿದು ಬರಬೇಕಾಗಿದೆ. ಇವರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.