



ಡೈಲಿ ವಾರ್ತೆ:08 ಏಪ್ರಿಲ್ 2023


ಆನೆ ದಾಳಿಗೆ ಯುವತಿ ಸಾವು: ತಾಯಿ ಗಂಭೀರ
ಚನ್ನಗಿರಿ: ಆನೆ ದಾಳಿಗೆ ಯುವತಿಯೋರ್ವಳು ಮೃತಪಟ್ಟ ದುರ್ಘಟನೆ ಚನ್ನಗಿರಿಯ ಸೋಮ್ಲಾಪುರ ಗ್ರಾಮದಲ್ಲಿ ಶನಿವಾರ ನಡೆದಿದೆ. ಘಟನೆಯಲ್ಲಿ ಯುವತಿಯ ತಾಯಿ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮದ ಕವನ (17) ಮೃತ ಯುವತಿ ಎಂದು ತಿಳಿದುಬಂದಿದೆ. ಮುಂಜಾನೆ ತಾಯಿ ಮಂಜುಳಾ (42) ಅವರ ಜೊತೆಯಲ್ಲಿ ಯುವತಿ ಜಮೀನಿಗೆ ತೆರಳಿದ್ದಳು. ಜಮೀನಿನಲ್ಲಿ ಅವರೆಕಾಯಿ ಬಿಡಿಸುವ ವೇಳೆ ತಾಯಿ ಹಾಗೂ ಮಗಳ ಮೇಲೆ ಆನೆ ದಾಳಿ ನಡೆಸಿದೆ.
ಆನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಕವನಾಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆದಿದೆ. ಆದರೆ ಯುವತಿ ದಾರಿ ಮಧ್ಯದಲ್ಲೇ ಸಾವನ್ನಪ್ಪಿದ್ದಾಳೆ. ಗಾಯಗೊಂಡಿರುವ ಮಂಜುಳಾ ಅವರಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶವಗಾರದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿದೆ.