ಡೈಲಿ ವಾರ್ತೆ:08 ಏಪ್ರಿಲ್ 2023

ಬಿ.ಸಿ.ರೋಡ್: ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಓರ್ವ ಮೃತ್ಯು, ಮೂವರಿಗೆ ಗಾಯ

ಬಂಟ್ವಾಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ 11:30ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಿ.ಸಿ.ರೋಡ್ ನಲ್ಲಿ ನಡೆದಿದೆ.

ಮೃತರನ್ನು ನಂದರಬೆಟ್ಟು ನಿವಾಸಿ ಸದಾಶಿವ ಆಚಾರ್ಯ(77) ಎಂದು ಗುರುತಿಸಲಾಗಿದೆ. ಕಾರು ಚಲಾಯಿಸುತ್ತಿದ್ದ ಸದಾಶಿವರ ಪುತ್ರ ಗಣೇಶ್ ಆಚಾರ್ಯ, ಮೊಮ್ಮಗ ಆಕಾಶ್, ಅಳಿಯ ಸುರೇಶ್ ಆಚಾರ್ಯ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ.

ಪುತ್ತೂರಿನ ಸಂಬಂಧಿಕರ ಮನೆಯಲ್ಲಿ ನಡೆದ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಿ ಕಾರಿನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಸಮೀಪದಲ್ಲಿ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ತಲೆಗೆ ಗಾಯವಾಗಿದ್ದ ಸದಾಶಿವರನ್ನು ಕೈಕಂಬ ಪರ್ಲಿಯಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.