



ಡೈಲಿ ವಾರ್ತೆ:08 ಏಪ್ರಿಲ್ 2023


ದಕ್ಷಿಣಕನ್ನಡ: ಮಾದಕವಸ್ತು ಕಳ್ಳಸಾಗಣೆ ಮಾಡುತ್ತಿದ್ದ ಓರ್ವನ ಬಂಧನ
ಮಂಗಳೂರು: ಮಾದಕ ವಸ್ತು ಕಳ್ಳಸಾಗಾಣಿಕೆ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಕಾಸರಗೋಡು ಚೆರ್ಕಳದ ಅಬ್ದುಲ್ಲಾ ಸಿ (39) ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿ ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಅಕ್ರಮ ಎಂಡಿಎಂಎ (Methylene dioxy methamphetamine) ಮಾದಕ ವಸ್ತುವನ್ನು ಸಾಗಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಎಸಿಪಿ ಪಿ.ಎ. ಹೆಗ್ಡೆ ನೇತೃತ್ವದ ಸಿಸಿಬಿ ಪೊಲೀಸರ ತಂಡ ಆರೋಪಿಯಿಂದ 150 ಗ್ರಾಂ ಎಂಡಿಎಂಎ, ಬಳಸಿದ ಕಾರು ಮತ್ತು ಮೊಬೈಲ್ ಫೋನ್ ಜಪ್ತಿ ಮಾಡಿದೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಮೌಲ್ಯ 17.61 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿಯ ವಿರುದ್ಧ ವಿಶಾಖಪಟ್ಟಣ ಮತ್ತು ಕಾಸರಗೋಡು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟಕ್ಕೆ ಸಂಬಂಧಿಸಿದ ಪ್ರಕರಣಗಳು ಬಾಕಿ ಇವೆ ಎಂದು ಪೊಲೀಸರು ತಿಳಿಸಿದ್ದಾರೆ.