ಡೈಲಿ ವಾರ್ತೆ:10 ಏಪ್ರಿಲ್ 2023

ಬಿ ಸಿ ರೋಡ್: ಬೈಕ್ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದು ಸಹಸವಾರ ಮೃತ್ಯು

ಬಂಟ್ವಾಳ : ಬೈಕ್ ಪ್ರಪಾತಕ್ಕೆ ಬಿದ್ದು ಬೈಕಿನ ಹಿಂಬದಿ ಸವಾರ ಚಿಕ್ಕ ಮಂಗಳೂರು ಮೂಲದ ಯುವಕ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ವೇಳೆ ಬಿ.ಸಿ.ರೋಡ್ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ.

ಚಿಕ್ಕಮಗಳೂರು ನಿವಾಸಿ ಯಶೋಧರ ಮೃತಪಟ್ಟ ದುರ್ದೈವಿ ಯುವಕ. ಬೈಕ್ ಸವಾರ ಅವಿನಾಶ್ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಯಾವುದೇ ಪ್ರಾಣಾಪಯವಿಲ್ಲದೆ ಪಾರಾಗಿದ್ದಾನೆ.

ಇವರಿಬ್ಬರೂ ಮಂಗಳೂರು ಸಿಟಿ ಸೆಂಟರ್ ನಲ್ಲಿ ಉದ್ಯೋಗಿಗಳಾಗಿದ್ದು, ಬೆಳ್ತಂಗಡಿಯಲ್ಲಿ ಸ್ನೇಹಿತನ ಮನೆಯಲ್ಲಿ ನಡೆಯುವ ಕೋಲಕ್ಕೆ ಹೋಗಿ ಅಲ್ಲಿಂದ ಸುಮಾರು 3.30 ಗಂಟೆ ವೇಳೆಗೆ ಬರುತ್ತಿರುವಾಗ ಬಿ.ಸಿ. ರೋಡ್ ಸಮೀಪದ ಕೆ.ಎಸ್.ಆರ್.ಟಿ.ಸಿ.ಬಸ್ ಡಿಪೋ ದ ಬಳಿ ತಲಪಾಡಿ ಎಂಬಲ್ಲಿ ಸುಮಾರು ಹತ್ತಕ್ಕೂ ಅಧಿಕ ಅಡಿ ಇರುವ ಆಳಕ್ಕೆ ಬಿದ್ದು ಬೈಕಿನ ಹಿಂಬದಿಯಲ್ಲಿ ಇದ್ದ ಸಹಸವಾರ ಯಶೋಧರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.


ಅಪಘಾತಕ್ಕೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಬಂಟ್ವಾಳ ಸಂಚಾರಿ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.