ಡೈಲಿ ವಾರ್ತೆ:10 ಏಪ್ರಿಲ್ 2023

ಇಂದು ಸಂಜೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಿಎಸ್ ಯಡಿಯೂರಪ್ಪ

ಹೊಸದಿಲ್ಲಿ: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಸುಮಾರು 170 ರಿಂದ 180 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಸಂಜೆ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಸೋಮವಾರ ಹೇಳಿದ್ದಾರೆ.

“ಇಂದು ಸಂಜೆಯೊಳಗೆ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು” ಎಂದು ಮಾಜಿ ಮುಖ್ಯಮಂತ್ರಿ ನವದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪಟ್ಟಿಯನ್ನು ಅಂತಿಮಗೊಳಿಸಲು ಇಂದು ಇನ್ನೂ ಒಂದು ಸಭೆ ಇದೆ, ಇಂದು ಸಂಜೆಯೊಳಗೆ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದು ಬಿಎಸ್ ವೈ ಹೇಳಿದ್ದಾರೆ. ಮೊದಲ ಪಟ್ಟಿಯಲ್ಲಿ 170 ರಿಂದ 180 ಹೆಸರುಗಳನ್ನು ಪ್ರಕಟಿಸಲಾಗುವುದು ಎಂದರು.