ಡೈಲಿ ವಾರ್ತೆ:11 ಏಪ್ರಿಲ್ 2023
✒️ ಓಂಕಾರ ಎಸ್. ವಿ. ತಾಳಗುಪ್ಪ
ಶಿವಮೊಗ್ಗ: 5 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಾನಗರ ಪಾಲಿಕೆ ರೆವಿನ್ಯೂ ಇನ್ಸ್‌ಪೆಕ್ಟರ್
ಶಿವಮೊಗ್ಗ: ಲಂಚ ಪಡೆಯುತ್ತಿದ್ದ ವೇಳೆ ಮಹಾನಗರ ಪಾಲಿಕೆ ರೆವಿನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.
ರೆವಿನ್ಯೂ ಇನ್ಸ್‌ಪೆಕ್ಟರ್ ಆರ್. ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಕಟ್ಟಡ ನಿರ್ಮಾಣಕ್ಕೆ ವ್ಯಕ್ತಿಯೊಬ್ಬರಿಗೆ ಎನ್‌ಒಸಿ ಕೊಡಲು ಮಂಜುನಾಥ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
5 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ವಡ್ಡಿನಕೊಪ್ಪ ಗ್ರಾಮದ ಹಾಲೇಶ್ ಎಂಬುವರ ದೂರು ಆಧರಿಸಿ, ಲೋಕಾಯುಕ್ತ ದಾಳಿ ನಡೆಸಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್ ಅವರ ಸೂಚನೆ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು.