ಡೈಲಿ ವಾರ್ತೆ:12 ಏಪ್ರಿಲ್ 2023

ಬಂಟ್ವಾಳ : ಇಬ್ರಾಹಿಂ ಕೈಲಾರ್ ಜೆಡಿಎಸ್ಸಿನಿಂದ ಕಾಂಗ್ರೆಸ್ಸಿಗೆ ಸೇರ್ಪಡೆ

ಬಂಟ್ವಾಳ : ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಬಂಟ್ವಾಳ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಇಬ್ರಾಹಿಂ ಕೈಲಾರ್ ಅವರು ರಮಾನಾಥ ರೈ ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಅವರ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಬುಧವಾರ ಬಿ ಸಿ ರೋಡಿನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿ ಉದ್ಘಾಟನೆ ವೇಳೆ ಇವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.
ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಇಬ್ರಾಹಿಂ ಕೈಲಾರ್ ಅವರು ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರಿಂದ ಆಶೀರ್ವಾದ ಪಡೆದರು.

ಪಕ್ಷ ಸೇರ್ಪಡೆ ಸಂದರ್ಭ ಪ್ರಮುಖರಾದ ಸುದೀಪ್ ಕುಮಾರ್ ಶೆಟ್ಟಿ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಿ ಪದ್ಮಶೇಖರ್ ಜೈನ್, ಪಿಯೂಸ್ ಎಲ್ ರೋಡ್ರಿಗಸ್, ಬಿ ಎಂ ಅಬ್ಬಾಸ್ ಅಲಿ, ಸುದರ್ಶನ್ ಜೈನ್, ಎಂ ಎಸ್ ಮುಹಮ್ಮದ್, ಮುಹಮ್ಮದ್ ಶರೀಫ್ ಶಾಂತಿಅಂಗಡಿ, ಅಬೂಬಕ್ಕರ್ ಸಿದ್ದೀಕ್, ಸದಾಶಿವ ಬಂಗೇರ, ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಪಿ ಎ ರಹೀಂ ಬಿ ಸಿ ರೋಡು, ನವಾಝ್ ಬಡಕಬೈಲು,
ಅಮಾನುಲ್ಲಾ ಗುಡ್ಡೆಯಂಗಡಿ, ಶರೀಫ್ ಭೂಯಾ ಆಲಡ್ಕ, ಜಯಂತಿ ಪೂಜಾರಿ, ಸಿರಾಜ್ ಮದಕ, ಹಾಜಿ ಅಬ್ದುಲ್ ಅಝೀಝ್ ಬೊಳ್ಳಾಯಿ ಮೊದಲಾದವರು ಉಪಸ್ಥಿತರಿದ್ದರು.