ಡೈಲಿ ವಾರ್ತೆ:14 ಏಪ್ರಿಲ್ 2023

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಲಕ್ಷ್ಮಣ ಸವದಿ

ಅಥಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ವಂಚಿತರಾಗಿರುವ ಹಿನ್ನಲೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮತ್ತು ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಇದೀಗ ರಾಜೀನಾಮೆ ನೀಡಿದ್ದಾರೆ.



ರಾಜೀನಾಮೆ ಪತ್ರದಲ್ಲಿ ನಾನು ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಪಕ್ಷದಲ್ಲಿನ ವಿವಿಧ ಹುದ್ದೆಗಳಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ರವಾನಿಸಿದ್ದಾರೆ.