ಡೈಲಿ ವಾರ್ತೆ:15 ಏಪ್ರಿಲ್ 2023
ಕುಂದಾಪುರ: ಹೊಳೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರಲ್ಲಿ ಮುಳುಗಿ ಮೃತ್ಯು.!
ಕುಂದಾಪುರ : ಕೋಣಿಯ ಕೆಳಾಕೇರಿಯ ಹೊಳೆಯಲ್ಲಿ ಸ್ಥಳೀಯ ಯುವಕರೊಂದಿಗೆ ಈಜಲು ತೆರಳಿದ್ದ ಮೂಡ್ಲುಕಟ್ಟೆಯ ಖಾಸಗಿ ಕಾಲೇಜೊಂದರ ಮೂವರು ವಿದ್ಯಾರ್ಥಿಗಳ ಪೈಕಿ ಓರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.
ತೀರ್ಥಹಳ್ಳಿ ಮೂಲದ ಪ್ರಥಮ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ತಿಲಕ್ (18) ಮೃತಪಟ್ಟ ವಿದ್ಯಾರ್ಥಿ. ಇವರು ಖಾಸಗಿ ಪಿಜಿಯಲ್ಲಿದ್ದು, ಅಲ್ಲಿನ ಪರಿಚಿತ ಯುವಕರೊಂದಿಗೆ ಈಜಲು ತೆರಳಿದ್ದಾಗ ಈ ಅವಘಡ ಸಂಭವಿಸಿದೆ.
ಮೃತದೇಹವು ಶನಿವಾರ ಬೆಳಿಗ್ಗೆ ಸಿಕ್ಕಿದ್ದು. ಮರಣೋತ್ತರ ಪರೀಕ್ಷೆಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕಳಿಸಲಾಗಿದೆ.
ಕುಂದಾಪುರ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.