ಡೈಲಿ ವಾರ್ತೆ:15 ಏಪ್ರಿಲ್ 2023

ಕೋಟ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ
ವಡ್ಡರ್ಸೆ ಮಧುವನದಲ್ಲಿ ಕಾಂಗ್ರೆಸ್ ಯುವ ಸಮ್ಮಿಲನ ಕಾರ್ಯಕ್ರಮ

ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಯುವ ಸಮ್ಮಿಲನ ಕಾರ್ಯಕ್ರಮವು ಏ. 14 ರಂದು ಶುಕ್ರವಾರ ಸಂಜೆ ಕೋಟ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ವಡ್ಡರ್ಸೆ ಮಧುವನದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಸ್ತುವಾರಿ ಮತ್ತು ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಜಿತ್ ಕುಮಾರ್ ಶೆಟ್ಟಿ ವಡ್ಡರ್ಸೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ದೀಪಬೆಳಗಿಸಿ ಉದ್ಘಾಟಿಸಿದರು.

ಈ ಕಾರ್ಯಕ್ರಮಕ್ಕೆ ರಾಜಸ್ಥಾನದಿಂದ ಆಗಮಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಮಹಿನ್ ಖಾನ್ ಮಾತನಾಡಿ ಕರ್ನಾಟಕದ ಚುನಾವಣೆವು ಇಡೀ ದೇಶದಲ್ಲಿ ಪ್ರಭಾವ ಬೀರಲಿದೆ. ಅದಕ್ಕಾಗಿ ನಾವೆಲ್ಲರೂ ಕಾಂಗ್ರೆಸ್ ನ್ನು ಗೆಲ್ಲಿಸುವ ಪ್ರಯತ್ನ ಮಾಡಬೇಕು. ಕಾಂಗ್ರೆಸ್ ನೀಡಿರುವಂತಹ ಗ್ಯಾರಂಟಿ ಕಾರ್ಡ್ ನ್ನು ಮನೆ ಮನೆಗೆ ತಲುಪಿಸಿ ಪ್ರತಿಯೊಂದು ಮತದಾರರಿಗೆ ಮನವರಿಕೆ ಮಾಡುವಂತ ಕೆಲಸ ಮಾಡಬೇಕು.
ದೇಶದಲ್ಲಿ ಶಾಂತಿ ಸೌಹಾರ್ಧತೆ ನೆಲಸಬೇಕಾದರೆ ಖಂಡಿತ ಕಾಂಗ್ರೆಸ್ ಅಧಿಕಾರಿಕ್ಕೆ ಬರಲೇಬೇಕು. ಆದ್ದರಿಂದ ಒಂದು ದಿನದ ನಿರ್ಧಾರವು ಐದು ವರ್ಷದ ನೆಮ್ಮದಿ ಬದುಕಿಗೆ ಹಾದಿಯಾಗುವುದು ಎಂದು ಮಹಿನ್ ಖಾನ್ ಹೇಳಿದರು.

ನ್ಯಾಯವಾದಿ ಚಿಂತಕ ಸುಧೀರ್ ಕುಮಾರ್ ಮುರೋಳಿ ದಿಕ್ಸೂಚಿ ಭಾಷಣ ಮಾಡಿ ಕೇಂದ್ರ ಸರಕಾರವು ದಕ್ಷಿಣಕನ್ನಡ ಜಿಲ್ಲೆಯ ವಿಜಯ ಬ್ಯಾಂಕ್ ನ್ನು ನಷ್ಟದಲ್ಲಿರುವ ಬ್ಯಾಂಕ್ ಅಪ್ ಬರೋಡದ ಜೊತೆ ವಿಲಿನ ಮಾಡಿ ದಕ್ಷಿಣಕನ್ನಡ ಜನರಿಗೆ ಅವಮಾನ ಮಾಡಿದೆ. ಅಲ್ಲದೆ ಕೇರಳ ಸರಕಾರ ದೆಹಲಿಗೆ ಕಳಿಸಿದ ನಾರಾಯಣ ಗುರುಗಳ ಸ್ತಬ್ದ ಚಿತ್ರವನ್ನು ತಿರಸ್ಕರಿಸಿದೆ. ಕನ್ನಡ ಪಠ್ಯ ಪುಸ್ತಕದಲ್ಲಿದ್ದ ನಾರಾಯಣ ಗುರುಗಳ ಪಠ್ಯವನ್ನು ಕಿತ್ತು ಅವಮಾನ ಮಾಡಿದ ಸರಕಾರ ಅದು ಬಿಜೆಪಿ ಸರಕಾರವಾಗಿದೆ ಎಂದರು. ದೇಶದಲ್ಲಿ ಗ್ಯಾಸ್, ತೈಲ ಬೆಲೆಗಳನ್ನು ಏರಿಸಿ ಬಡವರ ರಕ್ತವನ್ನು ಹೀರುವ ಕೆಲಸ‌ ಬಿಜೆಪಿ ಸರಕಾರ ಮಾಡಿದೆ ಎಂದು ಹೇಳಿದರು. ಈ ಬಾರಿ ಯುವ ಮತದಾರರು ಕುಂದಾಪುರ ಕ್ಷೇತ್ರದಲ್ಲಿ ದಿನೇಶ್ ಹೆಗ್ಡೆ ಮೊಳಹಳ್ಳಿಯವರನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ನ್ನು ಬಹುಮತದಿಂದ ಅಧಿಕಾರಕ್ಕೆ ತರುವುದರಲ್ಲಿ ಯಾವುದೇ ಸಂದೇಹ ಇಲ್ಲ ಎಂದು ಸುಧೀರ್ ಕುಮಾರ್ ಮುರೋಳಿ ಹೇಳಿದರು.

ಕುಂದಾಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ ಮಾತನಾಡಿ ರಾಜ್ಯ ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನ ಭಾಗ್ಯ, ಯುವನಿಧಿ ಈ ನಾಲ್ಕು ಕಾರ್ಯಕ್ರಮವನ್ನು ಗ್ಯಾರಂಟಿ ಕಾರ್ಡ್ ಮುಖಾಂತರ ನೀಡಿದೆ.
ಇದನ್ನು ನಮ್ಮ ಕಾರ್ಯಕರ್ತರು ಮನೆ ಮನೆಗೆ ತಲುಪಿಸಿ ಯುವಕರಿಗೆ ಹಾಗೂ ಮಹಿಳೆಯರಿಗೆ ಮನದಟ್ಟು ಮಾಡಬೇಕು. ಯುವಕರು, ಮಹಿಳೆಯರು ಕಾಂಗ್ರೆಸ್ ನ್ನು ಗೆಲ್ಲಿಸುತ್ತಾರೆ ಎನ್ನುವ ಭರವಸೆ ಇದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಸಮಿತಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ನಡೆಯಿತು.
ಎಂ. ಕೆ. ಮುಹಮ್ಮದ್ ಅವರಿಂದ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನವನ್ನು ಚಂದ್ರ ಶೆಟ್ಟಿ ಅವರಿಗೆ ಹಸ್ತಾಂತರ ಮಾಡಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಮೊಹಿನ್ ಖಾನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರಾದ ಕಿಶನ್ ಹೆಗ್ಡೆ ಕೊಳ್ಕೆಬೈಲ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ ವಡ್ಡರ್ಸೆ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್, ಕೋಟ ಬ್ಲಾಕ್ ಕಾಂಗ್ರೆಸ್ ಎಸ್ಸಿ ಎಸ್ಟಿ ಘಟಕದ ಅಧ್ಯಕ್ಷರಾದ ಶ್ರೀನಿವಾಸ್ ವಡ್ಡರ್ಸೆ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಕುಂದಾಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಚ್ಚಿತಾರ್ಥ ಶೆಟ್ಟಿ, ಕೋಟ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುನಿಲ್ ಮಡಿವಾಳ, ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ರಾದ ಚಂದ್ರ ಶೆಟ್ಟಿ ಯಾಳ್ಹಕ್ಲು, ಕಾಂಗ್ರೆಸ್ ಗ್ರಾಮೀಣ ಸಮಿತಿಯ ಮಾಜಿ ಅಧ್ಯಕ್ಷರಾದ ಎಂ ಕೆ ಮೊಹಮ್ಮದ್, ಮಧುವನ ಜಮಾತ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಇಲಿಯಾಸ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಮಾ ಸ್ವಾಗತಿಸಿ ನಿರೂಪಿಸಿ ವಂದಿಸಿದರು.