ಡೈಲಿ ವಾರ್ತೆ:15 ಏಪ್ರಿಲ್ 2023

ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಸೇರ್ಪಡೆಯಾದ ಎಂ.ಪಿ. ಕುಮಾರಸ್ವಾಮಿ

ಬೆಂಗಳೂರು: ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಸೇರ್ಪಡೆಯಾದರು.

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಎಂ.ಪಿ.ಕುಮಾರಸ್ವಾಮಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಹೈಕಮಾಂಡ್ ನಿರ್ಧಾರದಿಂದ ಎಂ ಪಿ ಕುಮಾರಸ್ವಾಮಿ ಬೇಸರಗೊಂಡಿದ್ದರು. ಜೊತೆಗೆ ಟಿಕೆಟ್ ಸಿಗದಿರಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರೇ ಕಾರಣ ಎಂದು ಆರೋಪಿಸಿದ್ದರು.