ಡೈಲಿ ವಾರ್ತೆ:16 ಏಪ್ರಿಲ್ 2023
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗ ಕಾರ್ಯದರ್ಶಿ ಶರೀಫ್ ಹಾದಿಮನಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಘೋಷಣೆ.!
ಯಲ್ಲಾಪುರ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗ ಹಾಗೂ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಶರೀಫ್ ಹಾದಿಮನಿ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ಹಲವು ವರ್ಷಗಳಿಂದ ಕಾಂಗ್ರೆಸ್ ನಲ್ಲಿ ಸಕ್ರಿಯ ಕಾರ್ಯಕರ್ತರಾಗಿ ದುಡಿದು, ಜಿಲ್ಲಾ ಕಾಂಗ್ರೆಸ್ ನ ಅಲ್ಪಸಂಖ್ಯಾತ ವಿಭಾಗದ ಮಾಜಿ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ ಪ್ರಸ್ತುತ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿದ್ದ ಶರೀಫ್ ಹಾದಿಮನಿ ಕಾಂಗ್ರೆಸ್ ಪಕ್ಷಕ್ಕೆ ಇದೀಗ ರಾಜೀನಾಮೆ ಘೋಷಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ತನ್ನ ಕ್ಷೇತ್ರದ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರನ್ನು ಗಮನಕ್ಕೆ ತೆಗೆದುಕೊಳ್ಳದೆ ಕಾಂಗ್ರೆಸ್ ಮೂಲ ಕಾರ್ಯಕರ್ತರನ್ನು ಕಡೆಗಣಿಸಿ ವಲಸಿಗರಿಗೆ ಮಣೆ ಹಾಕುತ್ತಿರುವ ಪಕ್ಷದ ನಡೆ ಅಲ್ಪಸಂಖ್ಯಾತರಿಗೆ ನೋವುಂಟುಮಾಡಿದೆ.ಇದರಿಂದ ಬೇಸರಗೊಂಡು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಆದ್ದರಿಂದ
ಅಪಾರ ಬೆಂಬಲಿಗರೊಂದಿಗೆ ಉತ್ತರ ಕನ್ನಡದ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸುವುದಾಗಿ ಶರೀಫ್ ಹಾದಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.