



ಡೈಲಿ ವಾರ್ತೆ:16 ಏಪ್ರಿಲ್ 2023


ಆರೋಗ್ಯದಲ್ಲಿ ಏರುಪೇರು: ಚಿಕ್ಕಮಗಳೂರು ಬಿಜೆಪಿ ಶಾಸಕ ಸಿ.ಟಿ.ರವಿ ಆಸ್ಪತ್ರೆಗೆ ದಾಖಲು
ಚಿಕ್ಕಮಗಳೂರು; ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಅವರು ಹೊಟ್ಟೆ ನೋವಿನ ಹಿನ್ನೆಲೆ ಆಶ್ರಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.
ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾರಣ ಶಾಸಕ ಸಿ.ಟಿ. ರವಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಹೊಟ್ಟೆನೋವು ಕಾಣಿಸಿಕೊಂಡ ಕಾರಣ ಸಿ.ಟಿ.ರವಿ ಅಲ್ಲಿಂದ ನೇರವಾಗಿ ಆಸ್ಪತ್ರೆಗೆ ತೆರಳಿದ್ದಾರೆ.