ಡೈಲಿ ವಾರ್ತೆ:18 ಏಪ್ರಿಲ್ 2023

ಕಾರು & ತೂಫಾನ್ ವಾಹನದ ನಡುವೆ ಭೀಕರ ಅಪಘಾತ: ನಾಲ್ವರು ಮೃತ್ಯು

ಕಡಬ:ಆಲ್ಟೋ ಕಾರು ಮತ್ತು ತೂಫಾನ್ ವಾಹನದ ನಡುವೆ ಭೀಕರ ಅಪಘಾತವುಂಟಾಗಿರುವ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ಇದೀಗ ಸಂಭವಿಸಿರುವುದಾಗಿ ವರದಿಯಾಗಿದೆ.

ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಕಾರು ಮತ್ತು ತೂಫಾನ್ ವಾಹನ ಮುಖಾಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆದಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ನಿರೀಕ್ಷಿಸಲಾಗಿದೆ.