ಡೈಲಿ ವಾರ್ತೆ:18 ಏಪ್ರಿಲ್ 2023

ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ನಾಮಪತ್ರ ಸಲ್ಲಿಕೆ

ಬೈಂದೂರು :ವಿಧಾನಸಭಾ ಚುನಾವಣೆಯಲ್ಲಿ ಸ್ವರ್ಧಿಸಲಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರು ಇಂದು ಬೈಂದೂರಿನ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಜಗದೀಶ ಗಂಗಣ್ಣನವರ್ ನಾಮಪತ್ರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ವಾಸುದೇವ ಯಡಿಯಾಳ್, ಎಸ್.ಪ್ರಕಾಶ್ಚಂದ್ರ ಶೆಟ್ಟಿ, ಎಸ್. ರಾಜು ಪೂಜಾರಿ, ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು