ಡೈಲಿ ವಾರ್ತೆ:19 ಏಪ್ರಿಲ್ 2023
ಧಾರವಾಡ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಮುಖಂಡನ ಬರ್ಬರ ಹತ್ಯೆ!
ಧಾರವಾಡ; ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಉಪಾಧ್ಯಕ್ಷನನ್ನು ಕೊಲೆ ಮಾಡಿರುವ ಘಟನೆ ತಾಲೂಕಿನ ಕೋಟೂರು ಗ್ರಾಮದಲ್ಲಿ ವರದಿಯಾಗಿದೆ.
ಪ್ರವೀಣ್ ಕಮ್ಮಾರ ಎಂಬವರೇ ಹತ್ಯೆಯಾದ ಯುವಕ.
ಪ್ರವೀಣ್ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹಾಗೂ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು ಎಂದು ತಿಳಿದು ಬಂದಿದೆ.
ನಿನ್ನೆ ತಡರಾತ್ರಿ ವೈಯಕ್ತಿಕ ಕಾರಣಕ್ಕಾಗಿ ಜಗಳ ನಡೆದು ದುಷ್ಕರ್ಮಿಗಳು ಪ್ರವೀಣ್ ಕಮ್ಮಾರನ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಪ್ರವೀಣ್ ಗೆ ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಈ ಸಂಬಂಧ ಗರಗ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.