ಡೈಲಿ ವಾರ್ತೆ:20 ಏಪ್ರಿಲ್ 2023
ಕಾರಿನಲ್ಲಿ ಅಕ್ರಮವಾಗಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 1.54 ಕೋಟಿ ರೂ. ವಶಕ್ಕೆ
ಬೆಳಗಾವಿ: ಇಂದು ಮುಂಜಾನೆ ಕಾರ್ಯಾಚರಣೆ ನಡೆಸಿದ ಪೊಲೀಸರು ರಾಮದುರ್ಗ ಪಟ್ಟಣ ಪಟ್ಟಣದಲ್ಲಿ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ 1.54 ಕೋಟಿ ರೂ.ನ್ನು ವಶಪಡಿಸಿಕೊಂಡಿದ್ದಾರೆ.
ಇಂದು ನಸುಕಿನ ವೇಳೆ ಕಾರಿನಲ್ಲಿ ವ್ಯಕ್ತಿಯೋರ್ವ ರಾಮದುರ್ಗ ಪಟ್ಟಣದ ಮೂಲಕ ಬೆಳಗಾವಿಗೆ ಹಣ ಸಾಗಣೆ ಮಾಡುತ್ತಿರುವುದನ್ನು ಗಸ್ತಿನಲ್ಲಿದ್ದ ಪೊಲೀಸರು ತಪಾಸಣೆ ವೇಳೆ ಪತ್ತೆಹಚ್ಚಿದ್ದಾರೆ. ಸೂಕ್ತ ದಾಖಲೆಗಳು ಇಲ್ಲದ ಕಾರಣ ಹಣ ಹಾಗೂ ಕಾರನ್ನು ವಶಕ್ಕೆ ಪಡೆದಿರುವ ಪೊಲೀಸರು ಚಾಲಕನನ್ನು ಬಂಧಿಸಿದ್ದಾರೆ. ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.