ಡೈಲಿ ವಾರ್ತೆ:24 ಏಪ್ರಿಲ್ 2023
ನಾಮಪತ್ರ ಹಿಂದಕ್ಕೆ ಪಡೆದ ಉಡುಪಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ. ಕೃಷ್ಣಮೂರ್ತಿ ಆಚಾರ್ಯ
ಉಡುಪಿ: ಉಡುಪಿ ಜಿಲ್ಲೆೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 7 ನಾಮಪತ್ರಗಳನ್ನು ಸೋಮವಾರ ಹಿಂಪಡೆಯಲಾಗಿದೆ.
ವಿಧಾನಸಭೆ ಚುನಾವಣೆಗೆ ಉಡುಪಿ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದ ಕೆ.ಕೃಷ್ಣಮೂರ್ತಿ ಆಚಾರ್ಯ ನಾಮಪತ್ರವನ್ನು ಹಿಂದಕ್ಕೆ ತೆಗದುಕೊಂಡಿದ್ದಾರೆ.
ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳು ನಾಮಪತ್ರ ಹಿಂದಕ್ಕೆ ತೆಗೆದುಕೊಳ್ಳಲು ಸೋಮವಾರ ( ಎ.24 ರಂದು) ಕೊನೆಯ ದಿನವಾಗಿತ್ತು. ಉಡುಪಿಯಿಂದ ಕಾಂಗ್ರೆಸ್ ನಿಂದ ಟಿಕೆಟ್ ಗೆ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಟಿಕೆಟ್ ಕೈತಪ್ಪಿತ್ತು. ಇದರಿಂದ ಸಹಜವಾಗಿ ಅಸಮಾಧನಾಗೊಂಡಿದ್ದ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದರು.
ಕಾರ್ಯಕರ್ತರ ಜೊತೆ ಚರ್ಚಿಸಿ ನಿರ್ಧಾರ ಕೈಗೊಂಡಿದ್ದ ಅವರು ತಮ್ಮ ಬೆಂಬಲಿಗರೊಂದಿಗೆ ನಾಮಪತ್ರವನ್ನು ಸಲ್ಲಿಸಿದ್ದರು. ಇದೀಗ ನಾಮಪತ್ರವನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ.
ಉಡುಪಿಯಿಂದ ಕಾಂಗ್ರೆಸ್ ಪಕ್ಷದಿಂದ ಪ್ರಸಾದ್ ರಾಜ್ ಕಾಂಚನ್ ಅವರು ಸ್ಪರ್ಧಿಸುತ್ತಿದ್ದಾರೆ.