ಡೈಲಿ ವಾರ್ತೆ:25 ಏಪ್ರಿಲ್ 2023

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕೂಟಿಗೆ ಡಿಕ್ಕಿ:ಸವಾರ ಗಂಭೀರ ಗಾಯ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸ್ಕೂಟಿಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 73 ರ ಚಕ್ ಮಕ್ಕಿ ಯಲ್ಲಿ ಮಂಗಳವಾರ ನಡೆದಿದೆ.

ಫಲ್ಗುಣಿ ಮೂಲದ ಸ್ಕೂಟಿ ಸವಾರ ಬೊಮ್ಮಯ್ಯ ಗಂಭೀರ ಗಾಯಗೊಂಡಿದ್ದು ಕೂಡಲೇ ಸಾರ್ವಜನಿಕರು ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಧರ್ಮಸ್ಥಳದಿಂದ ಆಂಧ್ರ ಪ್ರದೇಶಕ್ಕೆ ಹೋಗುತ್ತಿದ್ದ ಕಾರು ಹಾಗೂ ಫಲ್ಗುಣಿ ಕಡೆಯಿಂದ ಚಕ್ ಮಕ್ಕಿ ಕಡೆಗೆ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ.
ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.