ಡೈಲಿ ವಾರ್ತೆ:25 ಏಪ್ರಿಲ್ 2023
ಎ.27ರಂದು ಉಚ್ಚಿಲ ಮೀನುಗಾರರ ಸಮಾವೇಶಕ್ಕೆ ರಾಹುಲ್ ಗಾಂಧಿ ಭೇಟಿ:ಉಡುಪಿ ಎಸ್ಪಿಯಿಂದ ಸ್ಥಳ ಪರಿಶೀಲನೆ
ಕಾಪು: ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಎ.27ರಂದು ಉಚ್ಚಿಲಕ್ಕೆ ಆಗಮಿಸಿ ಮೀನುಗಾರರ ಸಮಾವೇಶ ಮತ್ತು ಅವರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮ ನಡೆಯುವ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಶಾಲಿನಿ ಜಿ ಶಂಕರ್ ಸಭಾಂಗಣದ ಸ್ಥಳವನ್ನು ಉಡುಪಿ ಎಸ್ಪಿ ಅಕ್ಷಯ್ ಮಚ್ಚೀಂದ್ರ ಹಾಕೇ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡ ರಾದ ಮಂಜುನಾಥ ಸುಣೇಗಾರ್, ಹರೀಶ್ ಕಿಣಿ, ಜಿತೇಂದ್ರ ಪುಟಾರ್ಡೋ, ಅಖಿಲೇಶ್ ಕೋಟ್ಯಾನ್, ಶರ್ಪುದ್ದೀನ್ ಶೇಖ್, ವಿಶ್ವಾಸ್ ಅಮೀನ್, ಸತೀಶ್ ಅಮೀನ್, ರೋಶನ್, ಸಂತೋಷ್ ಪಡುಬಿದ್ರೆ, ಶೇಖರ ಹೆಜ್ಮಾಡಿ, ದೀಪಕ್ ಎರ್ಮಾಳ್ ಮೊದಲಾದವರು ಉಪಸ್ಥಿತರಿದ್ದರು.