ಡೈಲಿ ವಾರ್ತೆ:25 ಏಪ್ರಿಲ್ 2023
ಫರಂಗಿಪೇಟೆ ಚೆಕ್ ಪೋಸ್ಟ್ ನಲ್ಲಿ 3 ಲಕ್ಷ ನಗದು ಹಣ ವಶಪಡಿಸಿದ ಪೊಲೀಸ್ ಸಿಬ್ಬಂದಿ
ಬಂಟ್ವಾಳ: ಫರಂಗಿಪೇಟೆ ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣೆಯ ವೇಳೆ ದಾಖಲೆ ರಹಿತ ನಗದು ಸಾಗಾಟ ಪ್ರಕರಣ ಪತ್ತೆಯಾಗಿದ್ದು, ಪೊಲೀಸರು 3 ಲಕ್ಷ ರೂ. ಮೊತ್ತವನ್ನು ವಶಪಡಿಸಿಕೊಂಡು ಚುನಾವಣಾ ಸಂಬಂಧಿಸಿ ನಗದು ವಶ ಪರಿಹಾರ ಸಮಿತಿಗೆ ಹಸ್ತಾಂತರಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ 3 ಲಕ್ಷ ರೂ. ನಗದು ಪತ್ತೆಯಾಗಿತ್ತು. ಈ ಕುರಿತು ದಾಖಲೆ ಕೇಳಿದಾಗ ಸಮರ್ಪಕ ಉತ್ತರ ಸಿಗದ ಹಿನ್ನೆಲೆಯಲ್ಲಿ 3 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.