ಡೈಲಿ ವಾರ್ತೆ:25 ಏಪ್ರಿಲ್ 2023

ಬೈಂದೂರು:ಬಿಜೆಪಿ ತೊರೆದು ಕಾಂಗ್ರೆಸ್ ಕೈ ಹಿಡಿದ ಘಟಾನುಘಟಿ ಬಿಜೆಪಿ ಮುಖಂಡರು:
ಹಿಂದೂತ್ವ ಯಾರ ಮನೆಯ ಆಸ್ತಿ ಅಲ್ಲ, ನಾನು ಕೂಡ ಹಿಂದೂ :ಡಿ.ಕೆ. ಶಿವಕುಮಾರ್

ಬೈಂದೂರು:ಹಿಂದೂತ್ವ ಯಾರ ಮನೆಯ ಆಸ್ತಿ ಅಲ್ಲ, ನಾನು ಕೂಡ ಹಿಂದೂ ನನ್ನಂತೆ ಸಾವಿರಾರು ಜನ ಕಾಂಗ್ರೇಸ್ ಕಾರ್ಯಕರ್ತರು ನಿತ್ಯ ಪೂಜೆ, ಧಾರ್ಮಿಕ ಚಟುವಟಿಕೆಯಲ್ಲಿ ನಿರತರಾಗಿರುತ್ತಾರೆ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಅವರು ಬೈಂದೂರಿನಲ್ಲಿ ನಡೆದ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತದ ಚುಕ್ಕಣಿ ಹಿಡಿಯುತ್ತದೆ ಕರಾವಳಿ ಭಾಗದ ಮೀನುಗಾರರ ಬೇಡಿಕೆಗಳಿಗೆ ಪ್ರಥಮ ಆದ್ಯತೆ ನೀಡುತ್ತೇವೆ ಎಂದು ಹೇಳಿದರು.

ಬೈಂದೂರು ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ಮಾತನಾಡಿ ಕಳೆದ ಚುನಾವಣೆಯಲ್ಲಿ ಸುಳ್ಳು ಅಪಪ್ರಚಾರಗಳ ಮೂಲಕ ಕಳೆದ ಬಾರಿ ನನ್ನನ್ನು ಪರಾಭವಗೊಳಿಸಲಾಗಿತ್ತು. ಆದರೆ ಈ ಬಾರಿ ಜನರು ಪ್ರಜ್ಞಾವಂತರಾಗಿದ್ದಾರೆ ಬಿಜೆಪಿಯ ಹಸಿಸುಳ್ಳು ನಾಟಕಗಳಿಗೆ ಮತದಾರರು ಬೆಲೆ ನೀಡಲಾರರು ಎಂದರು.

ಬಿಜೆಪಿಯ ಘಟಾನುಘಟಿ ಮುಖಂಡರುಗಳು
ಜಿ.ಪಂ ಮಾಜಿ ಸದಸ್ಯರುಗಳಾದ ಕೆ.ಬಾಬು ಶೆಟ್ಟಿ ತಗ್ಗರ್ಸೆ, ಶಂಕರ ಪೂಜಾರಿ, ಕುಂದಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ವೆಂಕಟ ಪೂಜಾರಿ, ಬಿಜೆಪಿ ಮುಖಂಡ ಸದಾಶಿವ ಡಿ.ಪಡುವರಿ ಸೇರಿದಂತೆ 150ಕ್ಕೂ ಅಧಿಕ ಮುಖಂಡರು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಉದ್ಯಮಿ ಯ.ಬಿ ಶೆಟ್ಟಿ ಉಪ್ಪುಂದ,ಪ್ರಚಾರ ಸಮಿತಿ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ, ಎಂ.ಎ.ಗಫೂರ್, ಎಸ್.ರಾಜು ಪೂಜಾರಿ, ಮಾಜಿ ಜಿ.ಪಂ ಸದಸ್ಯರಾದ ಕೆ.ಬಾಬು ಶೆಟ್ಟಿ ತಗ್ಗರ್ಸೆ, ಶಂಕರ ಪೂಜಾರಿ, ಕುಂದಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ವೆಂಕಟ ಪೂಜಾರಿ, ಸದಾಶಿವ ಡಿ.ಪಡುವರಿ,ಮಾಧ್ಯಮ ವಕ್ತಾರ ಡಾ.ಸುಬ್ರಹ್ಮಣ್ಯ ಭಟ್,ಜಿಲ್ಲಾ ಕಾಂಗ್ರೇಸ್ ಪದಾಧಿಕಾರಿಗಳು, ರಾಜ್ಯ ಕಾಂಗ್ರೇಸ್ ಪದಾಧಿಕಾರಿಗಳು ಹಾಗೂ ಕಾಂಗ್ರೇಸ್ ಮುಖಂಡರು ಹಾಜರಿದ್ದರು.

ಬೈಂದೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಸ್.ಮದನ್ ಕುಮಾರ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಪ್ರಸನ್ನ ಕಾರ್ಯಕ್ರಮ ನಿರ್ವಹಿಸಿದರು. ಪ್ರದೀಪ್ ಕುಮಾರ್ ಶೆಟ್ಟಿ ಅಂಪಾರು ವಂದಿಸಿದರು.