



ಡೈಲಿ ವಾರ್ತೆ:28 ಏಪ್ರಿಲ್ 2023


ವರದಿ: ವಿದ್ಯಾಧರ ಮೊರಬಾ
ಅಂಕೋಲಾ: ಪ್ರಧಾನಿ ಮೋದಿ ಆಗಮನಕ್ಕೆ ಭರದ ಸಿದ್ದತೆ : ಶಾಸಕಿ ರೂಪಾಲಿಯಿಂದ ಭೂಮಿ ಪೂಜೆ
ಅಂಕೋಲಾ : ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಪ್ರಚಾರ ಸಭೆನಡೆಸಲಿದ್ದು, ತಾಲೂಕಿನ ಹಟ್ಟಿಕೇರಿ ಗ್ರಾಪಂ.ವ್ಯಾಪ್ತಿ ಗೌರಿಕೆರೆ ಸಮೀಪ ಮೇ 3 ಬುಧವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ಜಿಲ್ಲೆಯ ವಿವಿಧ ಭಾಗಗಳಿಂದ ಸುಮಾರು 3 ಲಕ್ಷಕ್ಕೂ ಅಧಿಕ ಮೋದಿ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ವೆಂಕಟೇಶ ನಾಯಕ ನೇತೃತ್ವದಲ್ಲಿ ಶುಕ್ರವಾರ ಇಲ್ಲಿಯ ಗೌರಿಕೆರೆ ಬಳಿ ವಿವಿಧ ಧಾರ್ಮಿಕ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿ, ಕಾರ್ಯಕ್ರಮ ಯಶಸ್ವಿಸಿಗೆ ದೇವರಲ್ಲಿ ಪ್ರಾರ್ಥಿಸಿ ಅವರು ಮಾತನಾಡಿದರು.
ದೇಶದ ಪ್ರಧಾನ ಮಂತ್ರಿ ಮಹಾನ್ ನಾಯಕ ನರೇಂದ್ರ ಮೋದಿ ಅವರು ಕಾರವಾರ-ಅಂಕೋಲಾ ಕ್ಷೇತ್ರ ಕ್ಕೆ ಆಗಮಿಸುತ್ತಿರುವುದು ಸೌಭಾಗ್ಯವಾಗಿದ್ದು, ಅವರ ಭೇಟಿ ಜಿಲ್ಲೆಯಲ್ಲಿ ಹೆಚ್ಚಿನ ಅಭಿವೃದ್ಧಿಯ ವಿಚಾರಗ ಳಿಗೂ ಪೂರಕವಾಗಲಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ತಮ್ಮ ಜವಾಬ್ದಾರಿಯನ್ನು ಸಮ ರ್ಥವಾಗಿ ನಿಭಾಯಿಸಿಬೇಕು ಎಂದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ವೆಂಕಟೇಶ ನಾಯಕ ಮಾತನಾಡಿ, ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳನ್ನು ಕೇಂದ್ರಿ ಕೃತವಾಗಿಸಿ ಅಂಕೋಲಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ಸಭೆ ನಡೆಸಲಿದ್ದು, ಮೋದಿಯ ವರ ನಾಯಕತ್ವ ಬಿಜೆಪಿ ಸರ್ಕಾರದ ಯೋಜನೆಗಳನ್ನು, ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿದ ಜನತೆಯ ಆಶೀರ್ವಾದದಿಂದ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಬೇರಿ ಬಾರಿಸುವ ಮೂಲಕ ಮತ್ತೊಮ್ಮೆ ರಾಜ್ಯದಲ್ಲಿ ಬಹುಮತದಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ತಾಲೂಕಾ ಅಧ್ಯಕ್ಷ ಸಂಜಯ ನಾಯ್ಕ, ಪ್ರಮುಖರಾದ ಭಾಸ್ಕರ ನಾರ್ವೇಕರ್, ಎನ್.ಎಸ್.ಹೆಗಡೆ, ರಾಜೇಂದ್ರ ನಾಯ್ಕ, ಸುಬ್ರಹ್ಮಣ್ಯ ರೇವಣಕರ, ಜಗದೀಶ ನಾಯಕ ಮೊಗಟಾ, ನಿಲೇಶ ನಾಯ್ಕ, ಮಾದೇವ ಗೌಡ ಬೆಳಾಂಬರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸ್ಥಳ ಪರಿಶೀಲನೆ : ಮೇ 3 ರಂದು ಪ್ರಧಾನಿ ಮೋಧಿ ಪ್ರಚಾರ ಸಭೆ ನಡೆಯುವ ಸ್ಥಳವನ್ನು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಪರಿಶೀಲನೆ ಮಾಡಿ, ರಕ್ಷಣ ಇಲಾಖೆಯ ಪ್ರಮುಖರಿಂದ ಮಾಹಿತಿ ಪಡೆದರು. ಇದೇ ವೇಳೆ ತಹಸೀಲ್ದಾರ್ ಪ್ರವೀಣ ಹುಚ್ಚಣ್ಣನವರ, ಪಿಐ ಜಾನ್ಸ್‍ನ ಡಿಸೋಜಾ, ಪಿಎಸ್‍ಐ ಕುಮಾರ ಸಿ.ಕೆ. ಮತ್ತು ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
ಪೂರ್ವ ಸಿದ್ದತೆ : ಮೇ.3 ರಂದು ನಡೆಯಲಿರುವ ಮೋದಿ ಕಾರ್ಯಕ್ರಮದಲ್ಲಿ 3 ಲಕ್ಷಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಬಿಜೆಪಿ ನಾಯಕರು, ವಿ.ಐ.ಪಿ. ಮತ್ತು ಕಾರ್ಯಕರ್ತರು ಸೇರಿದಂತೆ 50 ಸಾವಿರ ಆಸನ. ವೇದಿಕೆಯಲ್ಲಿ 20 ಆಸನಗಳು, ಬೇಲೆಕೇರಿ ರಸ್ತೆ ಸಮೀಪ 10 ಸಾವಿರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆಗೆ ಸಿದ್ದತೆ ನಡೆಯುತ್ತಿದೆ. ಬಿಗಿ ಬಂದೋಬಸ್ತ್‍ಗಾಗಿ ಸಾವಿರಕ್ಕಿಂತ ಹೆಚ್ಚು ಪೊಲೀಸರು ನಿಯೋಜನೆಗೊಳಿಸುವ ಸಾಧ್ಯತೆ ಇದೆ ಎಂದು ಬಲ್ಲಮೂಲಗಳಿಂದ ತಿಳಿದಿದೆ.