ಡೈಲಿ ವಾರ್ತೆ: 01 ಮೇ 2023
ಕಟ್ಟಡದ ಮೇಲಿನಿಂದ ಜಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ; ಸ್ಥಳದಲ್ಲಿ ಡೆತ್ ನೋಟು ಪತ್ತೆ!
ಬೆಂಗಳೂರು;ಕಾಲೇಜು ವಿದ್ಯಾರ್ಥಿಯೋರ್ವಳು ಪೊಲೀಸ್ ಕ್ವಾಟ್ರಸ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ
ಬೆಂಗಳೂರಿನ ಬಿನ್ನಿಪೇಟೆ ಬಳಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಆಯಿಶಾ ಬಿ.ಆರ್.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.ಈಕೆ ಬೆಂಗಳೂರಿನ ಕಾಲೇಜೊಂದರಲ್ಲಿ ಬಿಎಸ್‌ಸಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದಳು ಎನ್ನಲಾಗಿದೆ.
ವಿದ್ಯಾರ್ಥಿನಿ ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿಟ್ಟು, ಬಿನ್ನಿಪೇಟೆ ಬಳಿಯ ಪೊಲೀಸ್ ಕ್ವಾಟ್ರಸ್‌ನ ಏಳನೇ ಮಹಡಿ ಕಟ್ಟಡದಿಂದ ಹಾರಿದ್ದಾಳೆ ಎನ್ನಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ ಭೀಮೇಶ್ ಎಂಬ ಯುವಕನನ್ನು ಆಯಿಶಾ ಪ್ರೀತಿ ಮಾಡುತ್ತಿದ್ದಳು.
ಆದರೆ ಇವರಿಬ್ಬರ ಪ್ರೀತಿಗೆ ಮನೆಯವರ ಒಪ್ಪಿಗೆ ಇರಲಿಲ್ಲ. ಮನೆಯವರು ಪ್ರೀತಿಯನ್ನು ನಿರಾಕರಿಸಿದ್ದರಿಂದ ತನ್ನ ಪ್ರಿಯಕರನ ಮೊಬೈಲ್ ನಂಬರ್ ಕೈ ಮೇಲೆ ಬರೆದುಕೊಂಡು ತನ್ನ ಸಾವಿನ ವಿಚಾರ ಆತನಿಗೆ ತಿಳಿಸುವಂತೆ ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ನನ್ನ ಸಾವಿಗೆ ಕಾರಣ ಯಾರೂ ಅಲ್ಲ. ಈ ಜೀವನದ ಮೇಲೆ ಜಿಗುಪ್ಸೆ ಬಂದ ಕಾರಣದಿಂದ ನಾನೇ ಸ್ವತಃ ಈ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾಳೆ ಎನ್ನಲಾಗಿದೆ.
ಭೀಮೆಶ್ ನಾಯಕ್ ತುಂಬಾ ಸೂಕ್ಷ್ಮ ಹಾಗೂ ಮುಗ್ಧ ವ್ಯಕ್ತಿ. ಅವರ ಹಾಗೂ ನನ್ನ ಮಧ್ಯೆ ಯಾವುದೇ ದೈಹಿಕ ಸಂಪರ್ಕವಿರುವುದಿಲ್ಲ. ನಾನು ಮಾಡಿದ ಈ ಸುಳ್ಳು ಕೇಸ್ನಿಂದ ಅವರ ತಂದೆಅನಾರೋಗ್ಯಕ್ಕೀಡಾಗಿದ್ದಾರೆ. ನನ್ನಿಂದ ಎರಡು ಕುಟುಂಬಗಳಿಗೂ ತುಂಬಾ ನೋವಾಗಿದೆ. ಈ ಪಶ್ಚಾತ್ತಾಪದಿಂದ ಹೊರಬರಲು ಆಗುತ್ತಿಲ್ಲ. ನಾನು ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ. ಭೀಮೇಶ್ ನಾಯಕ್ ನನ್ನ ಆತ್ಮ ಸ್ನೇಹಿತ ಎಂದು ಡೆತ್ ನೋಟ್ ನಲ್ಲಿ ಆಯಿಶಾ ಬರೆದುಕೊಂಡಿದ್ದಾಳೆ ಎಂದು ವರದಿಯಾಗಿದೆ.
ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.