ಡೈಲಿ ವಾರ್ತೆ:01 ಮೇ 2023
ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರನ್ನು ಭೇಟಿ ಮಾಡಿದ ಆಂದ್ರ ಪ್ರದೇಶ ಕಾಂಗ್ರೆಸ್ ಕಾನೂನು ವಿಭಾಗದ ಪ್ರಮುಖರು.
ಪೂಂಜಾಲಕಟ್ಟೆ : ಆಂದ್ರ ಪ್ರದೇಶ ಕಾಂಗ್ರೆಸ್ ಕಾನೂನು ವಿಭಾಗದ ಉಪಾಧ್ಯಕ್ಷ , ಹೈಕೋರ್ಟ್ ನ್ಯಾಯವಾದಿ ಕೇಸನ ರಾಮ ಕೋಟೇಶ್ವರ ರಾವ್ ಮತ್ತು ನ್ಯಾಯವಾದಿ ರಾಘವೇಂದ್ರ ಗೌಡ ಅವರು ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರನ್ನು ಸೋಮವಾರ ಭೇಟಿ ಮಾಡಿದರು.
ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಕ್ಷಿತ್ ಶಿವರಾಂ ಅವರು ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಅವರನ್ನು ಸನ್ಮಾನಿಸಿ ಚುನಾವಣೆಯಲ್ಲಿ ವಿಜಯಲಕ್ಷ್ಮಿ ತಮಗೆ ಒಲಿದು ಬರಲಿ ಎಂದು ಹಾರೈಸಿದರು.
ಇದೇ ವೇಳೆ ಶಾಸಕರೊಂದಿಗೆ ಪ್ರಚಾರ ಕಾರ್ಯದಲ್ಲಿ ಹೆಜ್ಜೆ ಹಾಕಿದ ಅವರು ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ಕೆ.ರಾಮ ಕೋಟೇಶ್ವರ ರಾವ್ ಅವರು ವಿಶ್ವಾಸ ವ್ಯಕ್ತಪಡಿಸಿದರು.