ಡೈಲಿ ವಾರ್ತೆ: 02 ಮೇ 2023

ಚುನಾವಣಾ ಕರ್ತವ್ಯಕ್ಕೆ ಹೊರಟಿದ್ದ ಬಸ್ ಪಲ್ಟಿ – 15ಕ್ಕೂ ಹೆಚ್ಚು ಸಿಬ್ಬಂದಿಗೆ ಗಾಯ

ವಿಜಯಪುರ: ಚುನಾವಣಾ ಕರ್ತವ್ಯದ ಮೇಲೆ‌ ಹೊರಟಿದ್ದ ಬಸ್ ಒಂದು ಪಲ್ಟಿಯಾಗಿ ಬಸ್ ನಲ್ಲಿದ್ದ 15ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಳ್ಳೂರು ಕ್ರಾಸ್‌ನಲ್ಲಿ ಮಂಗಳವಾರ ವರದಿಯಾಗಿದೆ.

ಬಸ್ ನ ಎಕ್ಸಲ್ ಕಟ್ ಆದ ಹಿನ್ನೆಲೆ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದ್ದು, ಬಸ್ ನಲ್ಲಿದ್ದ 15ಕ್ಕೂ ಅಧಿಕ ಸಿಬ್ಬಂದಿ ಗಾಯಗೊಂಡಿದ್ದಾರೆ.

ಬಸ್‌ನಲ್ಲಿ 40ಕ್ಕೂ ಅಧಿಕ ಪ್ರಯಾಣಿಕರಿದ್ದರು. ಗಾಯಾಳುಗಳನ್ನ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಷಯ ತಿಳಿದು ಗಾಯಾಳುಗಳ ನೆರವಿಗೆ ಮುದ್ದೇಬಿಹಾಳ ಚುನಾವಣಾಧಿಕಾರಿ ಚಂದ್ರಕಾಂತ ಪವಾರ್ ಧಾವಿಸಿದ್ದಾರೆ.

ಸಿಂದಗಿ ವಿಧಾನಸಭಾ ಕ್ಷೇತ್ರದ ಮತಕೇಂದ್ರ ತರಬೇತಿಗೆ ಸಿಬ್ಬಂದಿಗಳನ್ನ ಕರೆದೊಯ್ಯಲಾಗುತ್ತಿತ್ತು. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.