ಡೈಲಿ ವಾರ್ತೆ: 03 ಮೇ 2023

ಹೊನ್ನಾವರ: ಡಿ.ಕೆ.ಶಿವಕುಮಾರ್‌ ಹೆಲಿಕಾಪ್ಟರ್‌ ಪಕ್ಕದಲ್ಲೇ ಹೊತ್ತಿ ಉರಿದ ಬೆಂಕಿ

ಹೊನ್ನಾವರ : ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಚಾರಕ್ಕಾಗಿ ಡಿ.ಕೆ.ಶಿವಕುಮಾರ್‌ ಹೊನ್ನಾವರದ ರಾಮತೀರ್ಥಕ್ಕೆ ಆಗಮಿಸಿದ್ದು, ಈ ವೇಳೆ ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್‌ ಪಕ್ಕದಲ್ಲೇ ಇದ್ದ ಹುಲ್ಲಿಗೆ ಬೆಂಕಿ ಬಿದ್ದಿದೆ.

ಸ್ಮೋಕ್‌ ಕ್ಯಾಂಡಲ್‌ನಿಂದ ಹೆಲಿಪ್ಯಾಡ್‌ ಬಳಿ ಹುಲ್ಲಿಗೆ ಬೆಂಕಿ ಹತ್ತಿಕೊಂಡಿದ್ದು, ಅಗ್ನಿ ಶಾಮಕ ಸಿಬ್ಬಂದಿ ಕೂಡಲೇ ಬೆಂಕಿಯನ್ನು ನಂದಿಸಿದ್ದಾರೆ. ಡಿ.ಕೆ.ಶಿವಕುಮಾರ್ ಮೈಸೂರಿನಿಂದ ಹೊನ್ನಾವರಕ್ಕೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ.
ಮೊನ್ನೆಯಷ್ಟೇ ಎಚ್‌ಎಎಲ್‌ ಬಳಿ ರಣಹದ್ದು ಡಿಕ್ಕಿ ಹೊಡೆದ ಪರಿಣಾಮ ಆಗಲೂ ಹೆಲಿಕಾಪ್ಟರ್‌ನ ಗಾಜು ನುಜ್ಜುಗುಜ್ಜಾಗಿತ್ತು.

ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊನ್ನೆ ಮಧ್ಯಾಹ್ನ ಕೋಲಾರಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ ಹೊಡೆದಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಡಿ.ಕೆ.ಶಿವಕುಮಾರ್‌, ನಾನು ನಂಬಿರುವ ಶಕ್ತಿ ಹಾಗೂ ದೇವರು ನನ್ನ ಜತೆಗಿದ್ದು, ನನ್ನನ್ನು ಕಾಪಾಡಿದ್ದಾರೆ ಹೇಳಿದ್ದರು.