ಡೈಲಿ ವಾರ್ತೆ:05 ಮೇ 2023

ಕೋಟತಟ್ಟು ಗ್ರಾ. ಪಂ. ವ್ಯಾಪ್ತಿಯಲ್ಲಿ ಕಾಂಗ್ರೆಸ್ ಸಮಾವೇಶ:ಬಿಜೆಪಿ ಹಿಂದುತ್ವದ ಹೆಸರಿನಲ್ಲಿ ಹಿಂದೂಗಳ ದಿಕ್ಕು ತಪ್ಪಿಸುತ್ತಿದೆ – ಲಕ್ಷ್ಮೀಶ ಗಬ್ಲಡ್ಕ

ಕೋಟ:ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಕುಂದಾಪುರ ವಿಧಾನಸಭಾ ವ್ಯಾಪ್ತಿಯ ಕಾಂಗ್ರೆಸ್ ಗ್ರಾಮ ಸಮಾವೇಶ ಕೋಟ ಸೇರಿದಂತೆ ವಿವಿಧ ಭಾಗಗಳಲ್ಲಿ ಶುಕ್ರವಾರ ನಡೆಯಿತು. ಇಲ್ಲಿನ ಕೋಟ ಗ್ರಾಮಪಂಚಾಯತ್ ಮಣೂರು, ಕೋಟತಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಪಡುಕರೆ, ಕೋಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಕನ್ಯಾಣದಲ್ಲಿ ಸಮಾವೇಶ ಹಮ್ಮಿಕೊಂಡಿತು. ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ ಪರವಾಗಿ ಕಾಂಗ್ರೆಸ್ ಮುಖಂಡರು ಮತ ನೀಡಿ ಆಯ್ಕೆಗೊಳಿಸಲು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಲಕ್ಷ್ಮೀಶ ಗಬ್ಲಡ್ಕ ಬಿಜೆಪಿ ಪೊಳ್ಳ ಭರವಸೆ ನೀಡಿ ಜನಸಾಮಾನ್ಯರ ಬದುಕಿಗೆ ಸಂಚಕಾರ ತಂದಿರಿಸುತ್ತಿದೆ ಇದಕ್ಕೆ ಇತ್ತೀಚಿಗಿ ಆಡಳಿತವೇ ಸಾಕ್ಷಿಯಾಗಿ , ಹಿಂದುತ್ವದ ಹೆಸರಿನಲ್ಲಿ ಹಿಂದೂಗಳ ದಿಕ್ಕು ತಪ್ಪಿಸುತ್ತಿದೆ.ರಾಜ್ಯದ ಬಿಜೆಪಿ ಸರಕಾರ ಭ್ರಷ್ಟಾಚಾರದಲ್ಲೆ ಮುಳುಗಿದೆ. ಇಂಥಹ ಪಕ್ಷಕ್ಕೆ ಮರಳಿ ಅಧಿಕಾರ ನೀಡಬೇಡಿ ನೀಡಿದರೆ ಇಡೀ ರಾಜ್ಯವನ್ನೆ ಕೊಳ್ಳೆಹೊಡೆಯುವ ಕೆಲಸ ನಿರಂತರವಾಗಲಿದೆ ಅದಕ್ಕಾಗಿ ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ ಇವರನ್ನು ಆಯ್ಕೆಗೊಳಿಸಿ ಅತಿ ಹೆಚ್ಚು ಅಂತರದಲ್ಲಿ ವಿಜಯಶಾಲಿಯಾಗಿಸಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ಮರಳುವಂತೆ ಮಾಡಿ ಎಂದು ಕರೆ ಇತ್ತರು.

ಈ ಸಂದರ್ಭದಲ್ಲಿ ಕುಂದಾಪುರ ವಿಧಾನಸಭಾ ಅಭ್ಯರ್ಥಿ ದಿನೇಶಗ ಹೆಗ್ಡೆ ಮೊಳಹಳ್ಳಿ ಮಾತನಾಡಿ ಬೆಲೆಯೇರಿಕೆಯಿಂದ ಜನ ಕಂಗೆಟ್ಟಿದ್ದಾರೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ನಾವು ಕೊಟ್ಟ ಗ್ಯಾರಂಟಿಯನ್ನು ಮೊದಲ ಕ್ಯಾಬಿನೇಟ್ ಸಭೆಯಲ್ಲೇ ಅಂಗೀಕಾರಗೊಳ್ಳಲಿದೆ. ಇದೀಗ ನಮ್ಮ ಗ್ಯಾರಂಟಿ ಕಾರ್ಡ್ ಬಗ್ಗೆ ಬಿಜೆಪಿಯವರಿಗೆ ಭಯ ಆರಂಭಗೊಂಡಿದೆ

ನಮ್ಮ ಪಕ್ಷ ಎಲ್ಲ ಧರ್ಮ,ಜಾತಿಯನ್ನು ಸಮಾನ ರೀತಿಯಲ್ಲಿ ಕಾಣುತ್ತಿದ್ದು, ನಮಗೆ ಎಲ್ಲರೂ ಒಂದೇ. ಬಿಜೆಪಿ ಪಕ್ಷ ಸೋಲುವ ಭೀತಿಯಿಂದ ಅಪಪ್ರಚಾರ ಮಾಡುತ್ತಿದೆ. ಪಕ್ಷದ ಪ್ರಣಾಳಿಕೆಯಲ್ಲಿ ಸಂವಿಧಾನದ ವಿರೋಸುವ ಸಂಘಟನೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎನ್ನುವುದನ್ನು ಹೊರತು ಪಡಿಸಿದರೆ, ಭಜರಂಗ ದಳವನ್ನು ನಿಷೇಸುವ ಯಾವುದೇ ಪ್ರಸ್ತಾವನೆ ಕಾಂಗ್ರೆಸ ಪಕ್ಷದ ಮುಂದಿಲ್ಲ ಎಂದರು.

ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ ಕುಂದರ್, ಕಾಂಗ್ರೆಸ್ ಜಿಲ್ಲಾ ಮುಖಂಡ ಕಿಶನ್ ಹೆಗ್ಡೆ ಕೊಳ್ಕೆಬೈಲ್, ವಿಕಾಸ್ ಹೆಗ್ಡೆ, ರವೀಂದ್ರ ಐತಾಳ್, ದೇವೆಂದ್ರ ಗಾಣಿಗ, ಚಂದ್ರ ಆಚಾರ್, ಸುರೇಶ್ ಚೆಚ್ಚಕೆರೆ, ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ರಾಬರ್ಟ್ ನಾಯಕ್, ಸಾಹಿರಾಬಾನು, ಕೋಟ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ಶಿವ ಪೂಜಾರಿ, ಕೋಟ ಸಿ ಎ ಬ್ಯಾಂಕ್ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅಕ್ಷಯ ಶೆಟ್ಟಿ ಮೊಳಹಳ್ಳಿ ನಿರೂಪಿಸಿ, ಗಣೇಶ್ ನೆಲ್ಲಿಬೆಟ್ಟು ವಂದಿಸಿದರು.