ಡೈಲಿ ವಾರ್ತೆ: 08 ಮೇ 2023
ವರದಿ:ಕುಮಾರಿ ಭೂಮಿಕ ಬೆಂಗಳೂರು
ಕೊಲ್ಲೂರು: ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಮೂಕಾಂಬಿಕೆಯ ಸನ್ನಿಧಿಯಲ್ಲಿ ನೃತ್ಯೋಲ್ಲಾಸ
ಕೊಲ್ಲೂರು: ಕೊಡಚಾದ್ರಿ ಬೆಟ್ಟದ ತಪ್ಪಲಿನಲ್ಲಿರುವ ಕೊಲ್ಲೂರಿನ ಮೂಕಾಂಬಿಕೆಯ ಸನ್ನಿಧಿಯಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ನೃತ್ಯೋಲ್ಲಾಸ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು.
ದಿನಾಂಕ 07-05-2023 ರಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಪ್ರೌಢಶಾಲಾ ಮೈದಾನದಲ್ಲಿ ಅತ್ಯಂತ ಸುಂದರವಾಗಿ ನಿರ್ಮಿಸಿದ ಬೃಹತ್ ” ಸುಪರ್ಣ ವೇದಿಕೆಯಲ್ಲಿ” *ಈ ” ನೃತ್ಯೋಲ್ಲಾಸ’* ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಯ್ತು.
ಸಂಜೆ 6:00 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಿರಂತರವಾಗಿ ನಡೆದ ಕಾರ್ಯಕ್ರಮದಲ್ಲಿ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದು, ಕಾರ್ಯಕ್ರಮವು ಎಲ್ಲರ ಮೆಚ್ಚುಗೆಗೆ ಪಾತ್ರವಾಯ್ತು. ಸುಮಾರು 3 ಗಂಟೆಗೂ ಹೆಚ್ಚು ಕಾಲ ನೆಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿನ ವಿವಿಧ ರಾಜ್ಯಗಳ ಸಾಂಸ್ಕೃತಿಕ ನೃತ್ಯಗಳನ್ನ ಆಳ್ವಾಸ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದರು. ಕ್ಷೇತ್ರದ ವತಿಯಿಂದ ಕಲಾವಿದರನ್ನು ಸ್ಮರಣಿಕ ಶಾಲು ಪ್ರಸಾದವನ್ನ ನೀಡಿ ಗೌರವಿಸಲಾಯ್ತು.
ಇನ್ನೂ ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದಂತಹ ಚಂದ್ರಶೇಖರ ಶೆಟ್ಟಿ ಕೆರಾಡಿ ಸರ್ವ ಸದಸ್ಯರೂ ಹಾಗೂ ಕಾರ್ಯನಿರ್ವಾಹಣಾಧಿಕಾರಿಗಳಾದ ಎಸ್. ಸಿ. ಕೋಟಾರಗಸ್ತಿ ಉಪಸ್ಥಿತರಿದ್ದರು.