ಡೈಲಿ ವಾರ್ತೆ:08 ಮೇ 2023

ಕೋಟ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಪ್ರಯಾಣಿಕರು ಪಾರು !

ಕೋಟ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸ್ಕೂಟಿ ಹಾಗೂ ಸೈಕಲ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕೋಟದ ಬಾಳೆಬೆಟ್ಟುನಲ್ಲಿ ಸೋಮವಾರ ಸಂಜೆ ನಡೆದಿದೆ.

ಬಾರ್ಕೂರು ಕಡೆಯಿಂದ ಕೊಲ್ಲೂರಿಗೆ ಹೋಗುತ್ತಿದ್ದ ಕಾರು ಕೋಟದ ಬಾಳೆಬೆಟ್ಟಿನ ಹಾಲು ಡೈರಿ ಎದುರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸ್ಕೂಟಿ ಹಾಗೂ ಸೈಕಲ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಅದೃಷ್ಟವಶಾತ್ ಸೈಕಲ್ ಹಾಗೂ ಸ್ಕೂಟಿ ಸವಾರರು ರಸ್ತೆ ಬದಿಯಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿ ಹಾಲು ಕೊಡಲು ಹೋಗಿದ್ದರಿಂದ ದೊಡ್ಡ ದುರಂತ ತಪ್ಪಿದೆ. ಕಾರು ಪಲ್ಟಿಗೆ ಕಾರಿನಲ್ಲಿದ್ದ ಚಾಲಕ ಸೇರಿ 5 ಮಂದಿ ಇದ್ದು ಸಣ್ಣ ಪುಟ್ಟ ಗಾಯಗಳಾಗಿ‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದಿಂದ ಕಾರು, ಸೈಕಲ್ ಹಾಗೂ ಸ್ಕೂಟಿ ಸಂಪೂರ್ಣ ಜಖಂ ಗೊಂಡಿದೆ.

ಕೋಟ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ‌ ನಡೆಸಿದ್ದಾರೆ.