ಡೈಲಿ ವಾರ್ತೆ:09 ಮೇ 2023

SSLC ಪರೀಕ್ಷೆ ಫಲಿತಾಂಶ:ನಾಗೂರು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಸಮೀರ್ 618 ಅಂಕ

ಕುಂದಾಪುರ: 2022-2023 ನೇ ಸಾಲಿನ SSLC ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಸಮೀರ್ 618 (98.9%) ಅಂಕ ಪಡೆದು ಉತ್ತೀರ್ಣರಾಗಿದ್ದಾರೆ.

ವಿದ್ಯಾರ್ಥಿ ಮೊಹಮ್ಮದ್ ಸಮೀರ್ ನಾಗೂರು ಅಮೀರ್ ಹಾಗೂ ಶಾಗುಫ್ತಾ ದಂಪತಿಯ ಪುತ್ರನಾಗಿದ್ದಾನೆ.
ಈ ವಿದ್ಯಾರ್ಥಿಯ ಸಾಧನೆಗೆ ಪೋಷಕರು ಹರ್ಷ ವ್ಯಕ್ತಪಡಿಸಿದ್ದು, ಶಾಲೆಯ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.