



ಡೈಲಿ ವಾರ್ತೆ: 09 ಮೇ 2023


ಕಟಪಾಡಿ: ಬೈಕ್ ಗೆ ಟೆಂಪೋ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
ಕಾಪು: ಕಟಪಾಡಿ ಸಮೀಪದ ಸುಭಾಷ್ ನಗರ ರೈಲ್ವೆ ಸೇತುವೆ ಬಳಿ ಮಂಗಳವಾರ ಬೆಳಗ್ಗೆ ಟೆಂಪೊ, ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಬೈಕ್ ಸವಾರ ಶ್ರೀನಿವಾಸ ರಾವ್(50) ಮೃತ ದುದೈರ್ವಿ. ಕಟಪಾಡಿ ಕಡೆಯಿಂದ ಶಂಕರಪುರ ಕಡೆಗೆ ಹೋಗುತ್ತಿದ್ದ ಟೆಂಪೊ ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಯಿತು.
ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಶ್ರೀನಿವಾಸ ರಾವ್ ಸ್ಥಳದಲ್ಲೇ ಮೃತಪಟ್ಟರು. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.