ಡೈಲಿ ವಾರ್ತೆ: 09 ಮೇ 2023
ಎಸ್ಎಸ್ಎಲ್ ಸಿ ಫಲಿತಾಂಶ: ಕುಂದಾಪುರ ಎಕ್ಸಲೆಂಟ್ ಪ್ರೌಢಶಾಲೆ ಸುಣ್ಣಾರಿ ಶೇ. 98 ಫಲಿತಾಂಶ ದಾಖಲೆ
ಕುಂದಾಪುರ:ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯು 2022-23ನೇ ಸಾಲಿನ ಮೇ.8 ರಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದ್ದು, ಎಕ್ಸಲೆಂಟ್ ಪ್ರೌಢಶಾಲೆಯು ಶೇ.98 ಫಲಿತಾಂಶ ದಾಖಲಿಸಿಕೊಂಡಿದೆ.
ಸಂಸ್ಥೆಯ ವಿದ್ಯಾರ್ಥಿನಿ ತನ್ವಿ ಶೆಟ್ಟಿ ಇವರು 625 ಕ್ಕೆ 611 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ವೃತಿನ್ 610 ಅಂಕ, ಶಮನ 609 ಅಂಕ, ವಿವೇಕ್ 609 ಅಂಕ, ಆಧ್ಯಾ ಅಜಯ್ 605 ಅಂಕ, ಸಮೃದ್ಧ್ 602 ಅಂಕ, ಸ್ವಸ್ತಿಕ್ ಆರ್ ಶೆಟ್ಟಿ 602 ಅಂಕ, ಸಾತ್ವಿಕ್ ಆರ್ ಶೆಟ್ಟಿ 601 ಅಂಕ. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಒಟ್ಟು 43 ವಿದ್ಯಾರ್ಥಿಗಳಲ್ಲಿ 19 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದುದರ ಮೂಲಕ ಉತ್ತಮ ಫಲಿತಾಂಶ ದಾಖಲಿಸಿದ್ದಾರೆ. 21 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 02 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು ಸಂಸ್ಥೆ ಹಾಗೂ ಪೋಷಕರು ಹೆಮ್ಮೆ ಪಡುವಂತಹ ಫಲಿತಾಂಶ ನೀಡಿರುತ್ತಾರೆ.
ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ರಾಜ್ಯದ ನಾನಾ ಭಾಗದ ವಿದ್ಯಾರ್ಥಿಗಳು ಇಲ್ಲಿ ಪ್ರೌಢಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣದೊಂದಿಗೆ ಅಧ್ಯಯನ ಮಾಡುತ್ತಿದ್ದಾರೆ. ಅನುಭವಿ ನುರಿತ ಶಿಕ್ಷಕರ ಸಮೂಹವನ್ನು ಹೊಂದಿದ್ದು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು, ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿಯಾಗಿದೆ ಎಂದು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‍ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ ಹಾಗೂ ಖಜಾಂಚಿ ಭರತ್ ಶೆಟ್ಟಿಯವರು ತಿಳಿಸಿದ್ದಾರೆ. ಮತ್ತು ಎಲ್ಲಾ ವಿದ್ಯಾರ್ಥಿಗಳಿಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರಿಗೂ ಎಂ.ಎಂ. ಹೆಗ್ಡೆ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷರಾದ ಎಂ. ಮಹೇಶ್ ಹೆಗ್ಡೆಯವರು ಅಭಿನಂದನೆ ತಿಳಿಸಿದ್ದಾರೆ.