ಡೈಲಿ ವಾರ್ತೆ:09 ಮೇ 2023

ಕರಾವಳಿ ಭಾಗದಲ್ಲಿ ಮೇ. 10 ರಿಂದ 12 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ:ಹವಾಮಾನ ಇಲಾಖೆ

ಕರಾವಳಿ : ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 10 ರಿಂದ 12 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ. ಇದರಿಂದ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಇನ್ನೂ ಐದು ದಿನ ಮಳೆಯ ಪ್ರಮಾಣ ಅಧಿಕವಾಗಲಿದೆ ಎಂದು ಹವಮಾನ ಇಲಾಖೆ ಹೇಳಿದೆ.

ಅಲ್ಲದೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.