ಡೈಲಿ ವಾರ್ತೆ:10 ಮೇ 2023

ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟತಟ್ಟು ಗ್ರಾಮದಿಂದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಮತದಾನ

ಕೋಟ:ಉಡುಪಿ ಜಿಲ್ಲೆಯ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಕೋಟತಟ್ಟು ಗ್ರಾಮ ಪಂಚಾಯಿತಿನ ಬೂತ್ ನಂಬರ್ 165 ರಲ್ಲಿ ಸರತಿ ಸಾಲಿನಲ್ಲಿ ನಿಂತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮತದಾನ ಮಾಡಿದರು.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದ್ದು, ಇಂದು ಬೆಳಗ್ಗೆ 7ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿರಲಿದೆ.