ಡೈಲಿ ವಾರ್ತೆ:11 ಮೇ 2023

ಮಧ್ಯರಾತ್ರಿ ಡಿ.ಕೆ. ಶಿವಕುಮಾರ್ ಅವರಿಂದ ರಮೇಶ್ ಜಾರಕಿಹೊಳಿಗೆ ಬೆದರಿಕೆ ಕರೆ:ಮಾಧ್ಯಮದ ಮುಂದೆ ಆರೋಪ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮಗೆ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಮಾಜಿ ಸಚಿವ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಕಳೆದ ಮಧ್ಯರಾತ್ರಿ 12.30ಗೆ ಡಿ ಕೆ ಶಿವಕುಮಾರ್ ನನಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ನನಗೆ ಕರೆ ಮಾಡಿ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡದಂತೆ, ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಚುನಾವಣೆಯಲ್ಲಿ ಕೆಲಸ ಮಾಡದಂತೆ ತಾಕೀತು ಮಾಡಿದರು. ಇಲ್ಲದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ತಮಗೆ ಡಿಕೆಶಿ ಬೆದರಿಕೆ ಹಾಕಿದ್ದಾರೆ ಎಂದು ಇಂದು ಮಾಧ್ಯಮ ಪ್ರತಿನಿಧಿಗಳ ಮುಂದೆ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಈ ಬಾರಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ತಮ್ಮ ವಿರುದ್ಧ ಕೇಳಿಬಂದ ಗಂಭೀರ ಆರೋಪದಿಂದ ಸಚಿವ ಸ್ಥಾನ ಕಳೆದುಕೊಂಡ ಸಿ ಡಿ ಪ್ರಕರಣ ಸೇರಿದಂತೆ ಕೆಲವು ಕೇಸುಗಳನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.