ಡೈಲಿ ವಾರ್ತೆ:13 ಮೇ 2023
ಯಾರಾಗಲಿದ್ದಾರೆ ಕಾಂಗ್ರೆಸ್ ಮುಂದಿನ ಮುಖ್ಯಮಂತ್ರಿ..?
ಬೆಂಗಳೂರು:ದೇಶದಲ್ಲೇ ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಯಶಸ್ಸು ಸಾಧಿಸಿದೆ. ಬಿಜೆಪಿಯ ತೆಕ್ಕೆಯಲ್ಲಿದಂತಹ ಕರ್ನಾಟಕವನ್ನು ಕಾಂಗ್ರೆಸ್ನ ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಆಡಳಿತರೂಢ ಬಿಜೆಪಿ ಪಕ್ಷದ ಪ್ರಮುಖರು ಸೋಲು ಅನುಭವಿಸಿದ್ದಾರೆ.
ಕಾಂಗ್ರೆಸ್ 138 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಬಿಜೆಪಿ 64 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಜೆಡಿಎಸ್ 19 ಕ್ಷೇತ್ರಗಳಲ್ಲಿ ಹಾಗೂ ಮೂವರು ಇತರೆ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ರಾಜ್ಯದ ಈ ಚುನಾವಣೆಯ ಫಲಿತಾಂಶ, ಕರ್ನಾಟಕ ರಾಜ್ಯದಲ್ಲಿ ಮಾತ್ರವಲ್ಲದೆ ದೇಶದ ರಾಜಕೀಯದಲ್ಲಿ ಸಹ ಸಾಕಷ್ಟು ಬದಲಾವಣೆಗಳನ್ನು ಮಾಡಬಹುದು ಎಂದು ಹೇಳಲಾಗುತ್ತಿದೆ. ಲೋಕಸಭಾ ಚುನಾವಣೆಗೆ ಕೇವಲ ಒಂದು ವರ್ಷ ಮಾತ್ರ ಬಾಕಿ ಇರುವ ಹಿನ್ನೆಲೆಯಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದು ಕೂಡ ಅತ್ಯಂತ ಗಮನಹ ಸಂಗತಿಯಾಗಿದ್ದು ಎಲ್ಲರಿಗೂ ಸಹ ಕುತೂಹಲವನ್ನು ಮೂಡಿಸಿದೆ.