ಡೈಲಿ ವಾರ್ತೆ:14 ಮೇ 2023
ಸೋಲಿನಿಂದ ಎಂ ಪಿ ರೇಣುಕಾಚಾರ್ಯ ಭಾವುಕ, ರಾಜಕೀಯ ನಿವೃತ್ತ
ದಾವಣಗೆರೆ: ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಹೊನ್ನಾಳಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಕಾಂಗ್ರೆಸ್ ಅಭ್ಯರ್ಥಿ ಡಿ.ಜಿ.ಶಾಂತನಗೌಡ ಅವರ ವಿರುದ್ಧ ಸೋಲು ಕಂಡ ಹಿನ್ನೆಲೆಯಲ್ಲಿ ಅವರು ನಿರ್ಧಾರ ಕೈಗೊಂಡಿದ್ದಾರೆ.
ಮುಂದಿನ ದಿನಗಳಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರ ಕೆಲಸ ಮಾಡುವುದಾಗಿ ಸ್ಪಷ್ಪಪಡಿಸಿದ್ದಾರೆ.
2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಎಂ.ಪಿ. ರೇಣುಕಾಚಾರ್ಯ 80,624 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಡಿ.ಜಿ. ಶಾಂತನಗೌಡ 76,391 ಮತಗಳನ್ನು ಪಡೆದಿದ್ದರು. ಈ ಮೂಲಕ ಎಂಪಿ ರೇಣುಕಾಚಾರ್ಯ ಕೇವಲ 4233 ಮತಗಳಿಂದ ಗೆದ್ದಿದ್ದರು. ಬಳಿಕ ಸಿಎಂ ರಾಜಕೀಯ ಕಾರ್ಯದರ್ಶಿ ಆಗಿದ್ದರು.
ಕೋವಿಡ್ ಸಂದರ್ಭದಲ್ಲಿ ರೇಣುಕಾಚಾರ್ಯ ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದರು. ಹೀಗಾಗಿ ಈ ಬಾರಿಯೂ ಗೆಲ್ಲುವ ವಿಶ್ವಾಸದಲ್ಲಿದ್ದರು. ಆದರೆ. ಈ ಬಾರಿ ಸೋತಿರುವುದರಿಂದ ಚುನಾವಣಾ ರಾಜಕೀಯದಿಂದ ದೂರ ಸರಿಯುವುದಾಗಿ ಹೇಳಿದ್ದಾರೆ.