ಡೈಲಿ ವಾರ್ತೆ:14 ಮೇ 2023

ಕಾಂಗ್ರೆಸ್ ಗೆ ಬೆಂಬಲಿಸಿದ ಹರಪನಹಳ್ಳಿ ನೂತನ ಶಾಸಕಿ ಎಂ.ಪಿ ಲತಾ ಮಲ್ಲಿಕಾರ್ಜುನ

ಹರಪನಹಳ್ಳಿ : ( ವಿಜಯನಗರ ಜಿಲ್ಲೆ ) :- ಬಾರೀ ಕುತೂಹಲ ಮೂಡಿಸಿದ ಹರಪನಹಳ್ಳಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ರವರು ಕಾಂಗ್ರೆಸ್ ಟಿಕೇಟ್ ಕೈ ತಪ್ಪಿದ್ದರಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪ್ರಚಂಡ ಬಹುಮತದಿಂದ ಗೆದ್ದು ಹರಪನಹಳ್ಳಿಯಲ್ಲಿ ಪ್ರಥಮ ಮಹಿಳಾ ಶಾಸಕಿಯಾಗಿದ್ದಾರೆ.

ನೂತನ ಶಾಸಕಿ ಎಂ.ಪಿ ಲತಾ ಮಲ್ಲಿಕಾರ್ಜುನ್ ರವರು ಇಂದು ಬೆಂಗಳೂರಿಗೆ ತೆರಳಿ ಮಾಜಿ ಸಿ.ಎಂ. ಸಿದ್ದರಾಮಯ್ಯರವರನ್ನು ಬೇಟಿ ಮಾಡಿ ಕಾಂಗ್ರೆಸ್‌ ಗೆ ಬೆಂಬಲವನ್ನು ಸೂಚಿಸಿದ್ದಾರೆ. ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದರೆ.

ಹರಪನಹಳ್ಳಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನ ಸಭೆಗೆ ನೂತನ ಶಾಸಕಿಯಾಗಿ ಆಯ್ಕೆಯಾಗಿರುವ ಎಂ.ಪಿ ಲತಾ ಮಲ್ಲಿಕಾರ್ಜುನ್ ರವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಶುಭ ಹಾರೈಸಿದರು.