ಡೈಲಿ ವಾರ್ತೆ: 17 ಮೇ 2023

ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ?

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿಯಾಗಿ ನಾಳೆ ಗುರುವಾರ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿಯ ನಿವಾಸದಲ್ಲಿ ಅಂತಿಮ ಸಭೆ ನಡೆದಿದ್ದು ಈ ಸಭೆಯಲ್ಲಿ ಸಿದ್ದರಾಮಯ್ಯ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಅಂತಿಮಗೊಳಿಸಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಹೈಕಮಾಂಡ್‌ನಿಂದ ಅಂತಿಮ ಘೋಷಣೆಯೊಂದೇ ಬಾಕಿ ಇದೆ.

ಖರ್ಗೆ ನಿವಾಸದಿಂದ ಹೊರಟ ಸಿದ್ದರಾಮಯ್ಯ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲು ತೆರಳಿದ್ದಾರೆ.