ಡೈಲಿ ವಾರ್ತೆ: 19 ಮೇ 2023
✒️ ಓಂಕಾರ ಎಸ್. ವಿ. ತಾಳಗುಪ್ಪ
2,000ರೂ ನೋಟು ಹಿಂತೆಗೆದುಕೊಂಡ RBI ಸೆ.30ರವರೆಗೆ ವಿನಿಮಯ ಮಾಡಲು ಅವಕಾಶ !
ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ನಿರ್ಧರಿಸಿದೆ.
ಈ ಕರೆನ್ಸಿ ನೋಟುಗಳು ಕಾನೂನಾತ್ಮಕವಾಗಿ ಸಿಂಧುವಾಗಿ ಮುಂದುವರಿಯಲಿದೆ ಎಂದು ಆರ್ ಬಿಐ ಶುಕ್ರವಾರ ಹೇಳಿದೆ.
2,000 ರೂ ನೋಟು ಹೊಂದಿರುವವರು ಅದನ್ನು ಮರಳಿಸಲು ಸಮಯಾವಕಾಶ ಕೊಡಲಾಗುತ್ತದೆ. ಆರ್ ಬಿಐ ನೀಡಿರುವ ಮಾಹಿತಿ ಪ್ರಕಾ2023ರ 2023 ಸೆಪ್ಟಂಬರ್ 30ರೊಳಗೆ 2,000 ಮುಖಬೆಲೆಯ ನೋಟುಗಳನ್ನು ವಾಪಸ್ ಕೊಟ್ಟು ವಿನಿಮಯ ಮಾಡಿಕೊಳ್ಳಬಹುದಾಗಿದೆ.